ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ಜಯಂತಿ ಆಚರಣೆ

ಹೊಸಪೇಟೆ ಮಾ24 : ಮುಂದಿನ ಏಪ್ರೀಲ್ 5 ರಂದು ಬಾಬು ಜಗಜೀವನ್ ರಾಂ, ಹಾಗೂ ಏಪ್ರೀಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಣೆಯಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು ಎಂದು ತಹಸೀಲ್ದಾರ್ ವಿಶ್ವನಾಥ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡುವ ಮೂಲಕ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡಬೇಕಿದೆ. ಜಯಂತಿ ಸಂಬಂಧಿಸಿದಂತೆ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ನಗರಸಭೆ ಆಯುಕ್ತ ಮನ್ಸೂರ್ ಅಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ತಾಪಂ ಇಓ ವಿಶ್ವನಾಥ, ತಾಲೂಕು ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಎಂ.ಸಿ.ವೀರಸ್ವಾಮಿ ಹಾಗೂ ಸಂಘದ ಪದಾಧಿಕಾರಿಗಳು, ಬಾಬುಜಗಜೀವನ್ ರಾಂ ಸಂಘದ ಅಧ್ಯಕ್ಷ ಮೆಶಾಕ ಆಂಕಾಳಿ ಮತ್ತು ಸಂಘದ ಪದಾಧಿಕಾರಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿಗಳ ಪದಾಧಿಕಾರಿಗಳು, ಸಮಾಜ ಸೇವಕರುಗಳು, ಸಮಾಜ ಚಿಂತಕರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆ ಸೂಚನೆಯನ್ನು ಸಭೆಯಲ್ಲಿ ತಿಳಿಸಿದರು.