ಕೋವಿಡ್ ಪರಿಣಾಮ ಎದುರಿಸಲು ರಾಜ್ಯಗಳಿಗೆ ಸೂಚನೆ

ನವದೆಹಲಿ,ಜು.೨೧- ದೀರ್ಘಕಾಲದ ಕೋವಿಡ್ ಸಾಂಕ್ರಾಮಿಕದ ಪರಿಣಾಮ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸೋಂಕಿನಿಂದ ಎದುರಾಗಿರುವ ದೇಶದ ಆರ್ಥಿಕತೆ ಮತ್ತು ಜನರ ಆರೋಗ್ಯವನ್ನು ಕಾಪಾಡುವಂತೆ ರಾಜ್ಯ ಸರ್ಕಾರಗಳ ಮುಂದಿರುವ ಸವಾಲು ಅದನ್ನು ಎದುರಿಸುವಂತೆ ಕೇಂದ್ರ ಸೂಚಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ ಸುಖ್ ಮಾಂಡವಿಯ, ಕೋವಿಡ್ ಲಸಿಕೆ ಅಭಿಯಾನ ಹೆಚ್ಚಿಸುವ ಅಗತ್ಯವಿದೆ. ಇದುವರೆಗೆ ೨೦೦ ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ದಾಖಲೆ ಬರೆದಿದೆ ಎಂದಿದ್ದಾರೆ. ಕಳೆದ ವರ್ಷ ಬೇಸಿಗೆಯಲ್ಲಿ ಎರಡನೇ ಅಲೆಯ ಸಮಯದಲ್ಲಿ ರಾಸಾಯನಿಕಗಳು ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾಗಿ ಕೆಲಸ ಮಾಡಿದ ಅವಧಿಯಲ್ಲಿ ಆಮ್ಲಜನಕ ಮತ್ತು ನಿರ್ಣಾಯಕ ಔಷಧಗಳ ಪೂರೈಕೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಹಂತಗಳಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕಾರ್ಯವನ್ನು ಮಾಂಡವಿಯಾ ಅವರ ತಂಡಕ್ಕೆ ವಹಿಸಲಾಗಿದೆ – ಮತ್ತು ಪ್ರಮುಖ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಹೊರತರಲುಆರೋಗ್ಯ ಸೇವೆಗಳನ್ನು ಸುಲಭವಾಗಿ ಪ್ರವೇಶಿಸುವಂತೆ ಮಾಡುವಲ್ಲಿ ಯಶಸ್ಬಿಯಾಗಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮತ್ತು ಎಂಎಸ್‌ಎಂಇಎಸ್ ಸಚಿವ ನಿತಿನ್ ಗಡ್ಕರಿ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳು ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಅಡ್ಡಾದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು.