ಕೋವಿಡ್ ಪರೀಕ್ಷೆ-ಲಸಿಕೆ ಪ್ರತ್ಯೇಕ ವ್ಯವಸ್ಥೆಗೆ ಒತ್ತಾಯ..

ತುಮಕೂರು: ಕೋವಿಡ್-19 ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿರುವ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದೇ ಕಡೆ ನಡೆಯುತ್ತಿರುವ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಹಾಕುವ ಕಾರ್ಯವನ್ನು ಪ್ರತ್ಯೇಕಗೊಳಿಸುವಂತೆ ಪ್ರಗತಿಪರ ಚಿಂತಕ ಕೆ. ದೊರೈರಾಜು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯನ್ನು ಒತ್ತಾಯಿಸಿದರು.