ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ: ಡಿ.30: ಕೋವಿಡ್ ಬಗ್ಗೆ ಬೀದರ ಜಿಲ್ಲೆಯ ಜನರು ಆತಂಕ ಪಡಬೇಕಿಲ್ಲ ಆದರೆ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೋವಿಡ್ ಮುಂಜಾಗ್ರತೆ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಜ್ವರ. ನೆಗಡಿ. ಕೆಮ್ಮು ಇರುವವರು ಮಾಸ್ಕ ಧರಿಸಿಬೇಕು. ಹೆಚ್ಚಿನ ತೊಂದರೆಯಾದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್-19 ರೋಗದ ಲಕ್ಷಣಗಳು ಕಂಡು ಬಂದರೆ ಹೋಮ ಐಸೋಲೆಷನಲ್ಲಿ ಇರಬಹುದಾಗಿದ್ದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಮನೆಗಳಿಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಪರೀಕ್ಷಿಸುತ್ತಾರೆ. ಸೀವಿಯರ್ ಆದರೆ ಮಾತ್ರ ಜನರು ಆಸ್ಪತ್ರೆಗಳಿಗೆ ಅಡ್ಮಿಟ್ ಆಗಬೇಕೆಂದರು. ರಾಜ್ಯ ಸರ್ಕಾರ ಕಾಲ ಕಾಲಕ್ಕೆ ನೀಡುವ ಕೋವಿಡ್-19 ನಿಯಮಗಳನ್ನು ಎಲ್ಲರೂ ಪಾಲನೆ ಮಾಡುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಜಾತ್ರೆ. ಉತ್ಸವ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಯಾವುದೇ ನಿಬರ್ಂಧ ಇಲ್ಲದಿದ್ದರೂ ಸ್ವಯಂ ಆರೋಗ್ಯದ ಬಗ್ಗೆ ನಾವು ಗಮನಕೊಡಬೇಕು ಮತ್ತು ಹೊಸ ವರ್ಷ ಹಾಗೂ ಜಿಲ್ಲೆಯ ಹುಮನಾಬಾದ ವೀರಭದ್ರೇಶ್ವರ ಜಾತ್ರೆ ಸೇರಿದಂತೆ ಇತರೆ ಯಾವುದೇ ಉತ್ಸವದ ಸಂದರ್ಭಗಳಲ್ಲಿ ಜನರು ತಮ್ಮ ಆರೋಗ್ಯದ ಕಡೆ ಗಮನಕೊಡಬೇಕೆಂದರು. ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೆ ಅಲೆ ಬೀದರನಿಂದಲೆ ಆರಂಭವಾಗಿತ್ತು ಹಾಗಾಗಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್. ವೆಂಟಿಲೇಟರ್. ಆಕ್ಸಿಜನ್ ಸೇರಿದಂತೆ ಇತರೆ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತೆವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಬೇರೆ ರಾಜ್ಯಗಳಾದ ತಮಿಳುನಾಡು. ಕೇರಳ. ಮಹಾರಾಷ್ಟ್ರ. ತೆಲಂಗಾಣದಿಂದ ಬರುವ ಪ್ರಯಾಣಿಕರ ಹಿಸ್ಟರಿ ತಿಳಿಯಬೇಕು. 60 ವರ್ಷ ಮೇಲ್ಪಟ್ಟವರು ಮಾಸ್ಕ ಧರಿಸಬೇಕು. ಶಾಲಾ ಮಕ್ಕಳಲ್ಲಿ ನೆಗಡಿ ಕೆಮ್ಮು. ಜ್ವರ ಇರುವವರು ಮಾಸ್ಕ ಧರಿಸಿಕೊಂಡು ಶಾಲೆಗಳಿಗೆ ಹೋಗಬೇಕು ಹೆಚ್ಚಿನ ತೊಂದರೆ ಮಕ್ಕಳಲ್ಲಿ ಕಂಡು ಬಂದರೆ ಅವರ ಪಾಲಕರಿಗೆ ಶಿಕ್ಷಕರು ಮಾಹಿತಿ ನೀಡಬೇಕು.ಡೆಲಿವರಿ ಹೆಣ್ಣು ಮಕ್ಕಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ ಆದರೂ ಡಾಕ್ಟರ್ ಸಲಹೆ ಪಡೆದುಕೊಳ್ಳಬೇಕೆಂದರು.
ಜನರು ಗುಂಪು ಸೇರುವುದಕ್ಕೆ ಯಾವುದೇ ನಿಬರ್ಂಧಗಳಿಲ್ಲ. ಗಡಿಗಳಲ್ಲಿ ಚೆಕ್ ಪೆÇೀಸ್ಟಗಳು ಇರುವುದಿಲ್ಲ ಜನರು ಭಯಬೀತರಾಗುವ ಅವಶ್ಯಕತೆ ಇಲ್ಲ ಆದರೂ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಕೋವಿಡ್- 19 ಓಮಿಕ್ರಾನ್‍ನ ಉಪ ತಳಿಯಾದ ಜೆಎನ್-1 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮುಂಜಾಗ್ರತೆ ವಹಿಸಬೇಕೆಂದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲಿಫ್ ಬಡೋಲೆ ಮಾತನಾಡಿ ಜನರು ಗುಂಪು ಸೇರುವಲ್ಲಿ ಮಾಸ್ಕಗಳನ್ನು ಹಾಕಿಕೊಳ್ಳಿ. ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜ್ವರ. ಕೆಮ್ಮು. ನೆಗಡಿ ಇರುವ ಮಕ್ಕಳಿಗೆ ಶಾಲೆಗಳಿಗೆ ಕಳಿಸಬೇಡಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಮತ್ತು ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕೆಂದು ಹೇಳಿದರು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ ಪೆÇಲೀಸರು ತುರ್ತಾಗಿ ಸ್ಪಂದನೆ ಮಾಡಲು ಸಾರ್ವಜನಿಕರು 112 ಸಹಾಯವಾಣಿಗೆ ಕರೆ ಮಾಡಿ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ಈಗಾಗಲೇ ಹಿಂದಿನ ಅಲೆಯಲ್ಲಿ ಸಮಸ್ಯೆಗಳನ್ನು ನೋಡಿದ್ದು ಎಲ್ಲರೂ ಸೇರಿ ಟೀಂ ರೀತಿಯಲ್ಲಿ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಹೇಳಿದರು. ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಜ್ಞಾನೇಶ್ವರ ನೀರಗುಡಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೋಂಗರೆ. ನಾಗನಾಥ ಸಹಾಯಕ ಕಾರ್ಯಪಾಲಕ ಅಭಿಯಂತರರು ಬೀದರ. ಹುಮನಾಬಾದ ನಗರ ಸಭೆ ಮುಖ್ಯಾಧಿಕಾರಿ ಶಿವಕುಮಾರ. ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಸೀಲ್ದಾರರು. ತಾಲ್ಲೂಕ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು. ಕ್ಷೇತ್ರ ಶಿಕ್ಷಣಾಧಿಕಾರಿಗಳು. ನಗರ ಸಭೆ. ಪುರಸಭೆ ಮುಖ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.