ಕೋವಿಡ್ ಬಗ್ಗೆ ಪುಷ್ಪಅಮರ್‍ನಾಥ್ ಟ್ವೀಟ್

ಮೈಸೂರು,ಏ.1:- ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಅವರೇ ಖುದ್ದು ಟ್ವೀಟರ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನನ್ನ ಕೋವಿಡ್ ಪರೀಕ್ಷೆ ಪಾಸಿಟಿವ್ ಎಂದು ಧೃಢ ಪಟ್ಟಿದ್ದು, ಮುಂಜಾಗೃತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕೇಳಿಕೊಳ್ಳು ತ್ತೇನೆ’ ಎಂದು ಟ್ವೀಟರ್ ನಲ್ಲಿ ಬರೆದು ಮನವಿ ಮಾಡಿಕೊಂಡಿದ್ದಾರೆ. ಕಳೆದ ಕೆಲದಿನಗಳ ಹಿಂದೆ ಅವರು ಬೆಂಗಳೂರಿನಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಶಾಸಕಿ ಸೌಮ್ಯಾರೆಡ್ಡಿ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು.