ಕೋವಿಡ್ ಬೆಡ್‌ಗಳ ಸಂಖ್ಯೆ ಹೆಚ್ಚಿಸಿ : ಬಸವಂತಪ್ಪ

ದಾವಣಗೆರೆ ಮೇ 4 : ಜಿಲ್ಲೆಯಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲಾಸ್ಪತ್ರೆಯಲ್ಲಿ ಮತ್ತಷ್ಟು ಬೆಡ್‌ಗಳನ್ನು ಹೆಚ್ಚಿಸುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್. ಬಸವಂತಪ್ಪ ಜಿಲ್ಲಾಡಳಿವನ್ನು ಒತ್ತಾಯಿಸಿದ್ದಾರೆ.  ಸಿ.ಜಿ ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ರೋಗಿಗಳ ಸೇವೆಗೆ ಮುಂದಾಗಿರುವ ಸಂದರ್ಭದಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಚಿಕಿತ್ಸೆಗೆ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ, ಅವರಿಗೆ ಚಿಕಿತ್ಸೆ ಸಿಗಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಬೆಡ್‌ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಹೇಳಿದರು. ಕೆಲವು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೋವಿಡ್ ರೋಗಿಗಳಿಗೆ ರೆಮ್‌ಡಿಸಿವಿರ್ ಸಿಗುತ್ತಿಲ್ಲ. ಇದರಿಂದ ರೋಗಿಗಳಿಗೆ ಕಷ್ಟವಾಗಿದ್ದು, ಈ ಚುಚ್ಚುಮದ್ದು ಸಿಗುವಂತೆ ಮಾಡಬೇಕು ಎಂದು ಹೇಳಿದರು