ಕೋವಿಡ್ ಮದ್ದು 990 ಗೆ ಲಭ್ಯ

ನವದೆಹಲಿ, ಮೇ ೨೮- ಕೊರೋನಾ ಸೋಂಕಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಿರುವ ೨ ಡಿಜಿ ಕೋವಿಡ್ ಲಸಿಕೆ ಜೂನ್ ಮಧ್ಯಭಾಗದಿಂದ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ.
ಕೋವಿಡ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮದ್ದಿಗೆ ೯೦೦ ರೂಪಾಯಿ ನಿಗದಿ ಮಾಡಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಬಿಡುಗಡೆ ಮಾಡಿದ್ದರು ಆದರೆ ಹೈದರಾಬಾದ್ ನ ಡಾಕ್ಟರ್ ರೆಡ್ಡೀಸ್ ಪ್ರಯೋಗಾಲಯ ಪ್ರತಿ ಪಾಕೆಟ್ ಗೆ ೯೯೦ ರೂಪಾಯಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕಿನ ಔಷಧಿಯನ್ನು ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತಿದೆ ಖಾಸಗಿ ಆಸ್ಪತ್ರೆಗಳು ಮತ್ತು ಮಾರುಕಟ್ಟೆಯಲ್ಲಿ ನಿಗದಿತ ದರ ನೀಡಿ ಖರೀದಿ ಮಾಡಬೇಕು ಎಂದು ಉನ್ನತ ಮೂಲಗಳು ತಿಳಿಸಿವೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಿರುವ ಔಷಧಿ ದೇಹದಲ್ಲಿ ಆಮ್ಲಜನಕದ ಪ್ರಮಾಣವನ್ನು ಹೆಚ್ಚು ಮಾಡುವ ಜೊತೆಗೆ ರೋಗ ನಿರೋಧಕ ಶಕ್ತಿ ವೃದ್ಧಿಸಲು ಸಹಕಾರಿಯಾಗಲಿದೆ ಎಂದು ಡಿಆರ್ ಡಿಒ ತಿಳಿಸಿದೆ.