ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ

ಉಡುಪಿ, ಎ.೨೮- ಕೋವಿಡ್ ೨ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿ ದಂತೆ ಎ.೨೭ರಿಂದ ಮೇ ೧೨ರವರೆಗೆ ಸರಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಗಳನ್ನು ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು. ಮಾರ್ಗಸೂಚಿ ಗಳನ್ನು ಕಾಟಾಚಾರಕ್ಕೆ ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ಧ ಎಪಿಡಮಿಕ್ ಕಾಯಿದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಮಣಿಪಾಲದಲ್ಲಿ ರುವ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಸರಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಕೋವಿಡ್ ಉಲ್ಬಣವಾಗುವುದನ್ನು ನಿಯಂತ್ರಿಸಬೇಕು. ರೈಲು ಮತ್ತು ವಿಮಾನ ಪ್ರಯಾಣ ಮಾಡುವವರನ್ನು ಅವರು ಹೊಂದಿರುವ ಅಧಿಕೃತ ಟಿಕೆಟ್ ಆಧಾರದಲ್ಲಿ ಸಂಚಾರಕ್ಕೆ ಅನುಮತಿ ನೀಡಬೇಕು. ತುರ್ತು ಆರೋಗ್ಯ ಸಮಸ್ಯೆಯಿರುವ ರೋಗಿಗಳು ಆಟೋ, ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳಲ್ಲಿ ಸಂಚರಿಸಲು ಅನುಮತಿ ಇದೆ. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶ ನೀಡಿ ಎಂದರು. ಅವಶ್ಯಕ ಮತ್ತು ತುರ್ತು ಸೇವೆ ಒದಗಿಸುವ ಸಿಬ್ಬಂದಿಗೆ ಅವರ ಗುರುತಿನ ಚೀಟಿ ಆಧಾರದಲ್ಲಿ ಸಂಚರಿಸಲು ಅವಕಾಶ ಇದೆ ಹಾಗೂ ಗಾರ್ಮೆಂಟ್ಸ್ ಹೊರತುಪಡಿಸಿ ಎಲ್ಲಾ ಕೈಗಾರಿಕೆಗಳಲ್ಲಿ ಹಾಗೂ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಸೂಕ್ತ ಗುರುತಿನ ಚೀಟಿ ಹೊಂದಿ ಸಂಚರಿಸಲು ಅವಕಾಶ ಇದೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರು ತಮ್ಮ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು. ಸರಕು ಸಾಗಾಣಿಕೆ ವಾಹನಗಳು ಲೋಡ್ ಮತ್ತು ಅನ್‌ಲೋಡ್ ಮಾಡಿ ಸಂಚರಿಸಲು ಯಾವುದೇ ನಿರ್ಬಂಧಗಳಿಲ್ಲ. ಅಂತಹ ವಾಹನಗಳನ್ನು ತಡೆಯಬಾರದು ಎಂದು ಡಿಸಿ ಹೆಳಿದರು. ಕಟ್ಟಡ ನಿರ್ಮಾಣ ಚಟುವಟಿಕೆಗೆ ಅವಕಾಶವಿದ್ದು, ಕಾರ್ಮಿಕ ರಿಗೆ ಸಂಬಂಧಪಟ್ಟ ನಿರ್ಮಾಣ ಸಂಸ್ಥೆ ಅಥವಾ ಮಾಲಕರು ಸೂಕ್ತ ಗುರುತಿನ ಚೀಟಿ ಒದಗಿಸಬೇಕು. ಮೀನುಗಾರಿಕೆಯನ್ನು ನಿಗದಿತ ಅವಧಿಯೊಳಗೆ ಮಾಡಲು ಕ್ರಮ ಕೈಗೊಳ್ಳಿ. ಕೃಷಿ ಚಟುವಟಿಕೆ ನಡೆಸಲು ನಿರ್ಬಂಧಗಳಿಲ್ಲ ಎಂದವರು ವಿವರಿಸಿದರು. ಮದುವೆ ಕಾರ್ಯಕ್ರಮಕ್ಕೆ ೫೦ ಮಂದಿ, ಶವ ಸಂಸ್ಕಾರಕ್ಕೆ ೫ ಮಂದಿ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಮೊನ್ನೆ ನಡೆದ ವಿವಾಹ ಕಾರ್ಯಕ್ರಮಗಳ ಬಗ್ಗೆ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಂಡಿ ದ್ದಾರೆ. ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಇದೇ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿ.ಜಗದೀಶ್ ಹೇಳಿದರು. ಸಭೆಯಲ್ಲಿ ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.