ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ವಿಮಾನ‌ ನಿಲ್ದಾಣದಲ್ಲಿ ದಂಡ

ನವದೆಹಲಿ, ಮಾ.30- ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ನಡುವೆ ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ತಲೆನೋವು ತರಿಸಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಮಾನ ನಿಲ್ದಾಣದಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸುವುದೂ ಮತ್ತು ಇನ್ನಿತರ ಕ್ರಮಗಳನ್ನು ಕೈಗೊಳ್ಳಲು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮುಂದಾಗಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ.

ಪ್ರತಿಯೊಂದು ವಿಮಾನಯಾನ ಸಂಸ್ಥೆಗಳು ಕೂಡ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸುವ ಜೊತೆಗೆ ಪ್ರಯಾಣಿಕರು ಮಾರ್ಗಸೂಚಿಗಳನ್ನು ಪಾಲಿಸುವಂತೆ ನೋಡಿಕೊಳ್ಳುವಂತೆ ನಿರ್ದೇಶನ ನೀಡಿದೆ.

ಇತ್ತೀಚಿಗೆ ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಪ್ರಯಾಣಿಕರು ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ವಿಮಾನಯಾನ ಸಂಸ್ಥೆಗಳು ಪ್ರತಿಯೊಬ್ಬರು ಪ್ರಯಾಣಿಕರು ಮಾರ್ಗಸೂಚಿ ತಪ್ಪದೇ ಪಾಲಿಸುವಂತೆ ನೋಡಿಕೊಳ್ಳುವಂತೆ ನಿರ್ದೇಶನ ನೀಡಿದೆ.

ವಿಮಾನನಿಲ್ದಾಣಗಳಲ್ಲಿ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ತಪ್ಪದೇ ಪಾಲಿಸಬೇಕು ಇಲ್ಲದಿದ್ದರೆ ಅಂಥವರ ವಿರುದ್ಧ ಸ್ಥಳದಲ್ಲೇ ದಂಡ ವಿಧಿಸುವುದು ಸೇರಿದಂತೆ ಇನ್ನಿತರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಕೆಲವು ಪ್ರಯಾಣಿಕರು ಪದೇಪದೇ ಮಾರ್ಗಸೂಚಿಗಳನ್ನು ಅವಲಂಬಿಸಿರುವುದು ನಾಗರಿಕ ವಿಮಾನಯಾನ ಸಚಿವಾಲಯದ ಅಸಮಾಧಾನಕ್ಕೆ ಕಾರಣವಾಗಿದೆ