ಕೋವಿಡ್ ಮುಕ್ತಗೊಳಿಸುವಲ್ಲಿ ದಾವಣಗೆರೆ ಜಿಲ್ಲೆ ಮಾದರಿಯಾಗಲಿ

 ದಾವಣಗೆರೆ, ಮೇ.29; ಕೋವಿಡ್ ಮುಕ್ತವಾಗಿಸುವ ಹಾದಿಯಲ್ಲಿ ದಾವಣಗೆರೆ ಜಿಲ್ಲೆ ಇತರೆ ಜಿಲ್ಲೆಗಳಿಗೆ ಮಾದರಿಯಾಗುವಂತೆ ಜಿಲ್ಲಾ ಮತ್ತು ತಾಲ್ಲೂಕು ತಂಡಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಹಾಗೂ ಗೇಮ್ ಚೇಂಜರ್ ಎಂದೇ ಪರಿಗಣಿಸಲಾದ ಲಸಿಕಾಕರಣವನ್ನು ಯೋಜಿತ ರೀತಿಯಲ್ಲಿ ಮಾಡಿ ಯಶಸ್ಸು ಸಾಧಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಕಿವಿಮಾತು ಹೇಳಿದರು. ಜಿಲ್ಲಾಡಳಿತ ಕಚೇರಿಯಲ್ಲಿ  ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಜಿಲ್ಲಾ ತಂಡ ಉತ್ತಮವಾಗಿ ತಯಾರಿ ಮಾಡಿಕೊಂಡಿದೆ. ಅದೇ ರೀತಿಯಲ್ಲಿ ತಾಲ್ಲೂಕು ತಂಡಗಳು ಸಹ ತಯಾರಿ ಮಾಡಿಕೊಂಡು ಕೈಜೋಡಿಸಿದಲ್ಲಿ ಜಿಲ್ಲೆ ಕೊರೊನಾ ಮುಕ್ತವಾಗಿ, ಮಾದರಿ ಜಿಲ್ಲೆಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದರು.ಲಸಿಕೆ – ಗೇಮ್ ಚೇಂಜರ್ : ಕೋವಿಡ್ ಲಸಿಕೆ ಗೇಮ್ ಚೇಂಜರ್ ಆಗುವುದರಲ್ಲಿ ಅನುಮಾನವಿಲ್ಲ. ಹೆಚ್ಚೆಚ್ಚು ಲಸಿಕಾಕರಣವಾದಷ್ಟು ಕೊರೊನಾ ಮುಕ್ತರಾಗಲು ಸಾಧ್ಯವಿದೆ. ಆದ ಕಾರಣ ಟಾರ್ಗೆಟೆಡ್ ಸಮುದಾಯಗಳಾದ ಆರೋಗ್ಯ, ಫ್ರಂಟ್‌ಲೈನ್ ವಕರ‍್ಸ್ ಹಾಗೂ ಇ-ಕಾಮರ್ಸ್ ಡೆಲಿವರಿ ಬಾಯ್ಸ್, ಆಟೋ ಮತ್ತು ಟ್ಯಾಕ್ಸಿ ಡ್ರೆöÊವರ್‌ಗಳು ಈ ರೀತಿ ಸೇವಾನಿರತರಿಗೆ ಮೊದಲ ಆದ್ಯತೆಯಲ್ಲಿ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಬೇಕು.  ಈಗ ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿದೆ. ಮುಂದಿನ ದಿನಗಳಲ್ಲಿ ಲಸಿಕೆ ಪೂರೈಕೆ ಸಮರ್ಪಕವಾಗಿ ಆಗುವ ನಿರೀಕ್ಷೆ ಇದ್ದು ಈಗಿನಿಂದಲೇ ಲಸಿಕೆ ಹಾಕುವ ಬಗ್ಗೆ ಯೋಜನೆ ರೂಪಿಸಿಕೊಂಡು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕುಗಳ ತಹಶೀಲ್ದಾರರು, ಇಓ ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಗ್ರಾಮೀಣ ಮಟ್ಟದಲ್ಲಿ ಮತ್ತು ನಗರ ಭಾಗದಲ್ಲಿ ಟಾಸ್ಕ್ಫೋರ್ಸ್ ತಂಡಗಳನ್ನು ಚುರುಕುಗೊಳಿಸಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಗೊಳಿಸಬೇಕು. ವಾರದಲ್ಲಿ 2 ರಿಂದ 3 ದಿನ ಬೆಳಿಗ್ಗೆ 6 ರಿಂದ 12 ಗಂಟೆವರೆಗೆ ದಿನಸಿ, ತರಕಾರಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿ ಇನ್ನುಳಿದ ದಿನಗಳಂದು ಹಾಲು ಒಂದನ್ನು ಹೊರತುಪಡಿಸಿ ಸಂಪೂರ್ಣ ಬಂದ್ ಮಾಡುವ ಬಗ್ಗೆಯೂ ಜಿಲ್ಲಾಧಿಕಾರಿಗಳಿಗೆ ಚಿಂತನೆ ನಡೆಸುವಂತೆ ತಿಳಿಸಲಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ. ಸಿಇಓ ಡಾ.ವಿಜಯ ಮಹಾಂತೇಶ ಬಿ.ದಾನಮ್ಮನವರ್, ಎಡಿಸಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‌ಎಲ್‌ಓ ರೇಷ್ಮಾ ಹಾನಗಲ್ ಡಿಹೆಚ್‌ಓ ಡಾ.ನಾಗರಾಜ್, ಡಿಎಸ್ ಡಾ.ಜಯಪ್ರಕಾಶ್, ಆರ್‌ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.