ಕೋವಿಡ್ ಮುಕ್ತಿಗೆ ಮಹಾಮೃತ್ಯುಂಜಯ ಮಂತ್ರ ಪಠಣ ಪಂಚಾಚಾರ್ಯ ಜಯಂತಿ ಯುಗಮಾನೋತ್ಸವ ನಾಳೆ

ಬೀದರ್:ಎ.17: ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಏಪ್ರಿಲ್ 18 ರಂದು ಬೆಳಿಗ್ಗೆ 11.21ಕ್ಕೆ ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕೋವಿಡ್ ಮುಕ್ತಿಗಾಗಿ ಮಹಾಮೃತ್ಯುಂಜಯ ಮಂತ್ರ ಪಠಣ ಕಾರ್ಯಕ್ರಮ ನಡೆಯಲಿದೆ.
ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವ ಸೇವಾ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿವೆ.
ಜಿಲ್ಲೆಯ ಶಿವಾಚಾರ್ಯರು, ವಿರಕ್ತ ಮಠಾಧೀಶರು ಹಾಗೂ ಸಂತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋವಿಡ್ ಸೋಂಕಿನ ಕಾರಣ ಕಡ್ಡಾಯ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಂಡು ಕಾರ್ಯಕ್ರಮ ನಡೆಸಲು ಸಂಘಟಕರು ಸಿದ್ಧತೆ ಮಾಡಿದ್ದಾರೆ.
ಕೋವಿಡ್ ಸೋಂಕಿನ ನಿವಾರಣೆಗಾಗಿ ಜಿಲ್ಲೆಯ ವೈದಿಕ ತಂಡದವರು ಹಾಗೂ ಹಿರಿಯ ಸಂಗೀತ ಕಲಾವಿದರು ಕಾರ್ಯಕ್ರಮದಲ್ಲಿ ಮಹಾಮೃತ್ಯುಂಜಯ ಮಂತ್ರ ಪಠಣ ಮಾಡಿಸಲಿದ್ದಾರೆ.
ಜಿಲ್ಲೆಯ ಭಕ್ತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಠಾಧೀಶರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಪುನೀತರಾಗಬೇಕು ಎಂದು ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವ ಸೇವಾ ಸಮಿತಿಯ ಪ್ರಮುಖರಾದ ಸಿದ್ರಾಮಯ್ಯ ಸ್ವಾಮಿ, ಶಿವಯ್ಯ ಸ್ವಾಮಿ, ರವಿ ಸ್ವಾಮಿ, ವರದಯ್ಯ ಸ್ವಾಮಿ, ಶ್ರೀಕಾಂತ ಸ್ವಾಮಿ ಸೋಲಪುರ ಹಾಗೂ ಗುರುರಾಜ ಸ್ವಾಮಿ ಮೋಳಕೇರಿ ಮನವಿ ಮಾಡಿದ್ದಾರೆ.