ಕೋವಿಡ್ ರೋಗಿಗಳ ಚಿಕಿತ್ಸೆಗೆ ಎಸ್.ಎನ್.ಸಿ‌.ಯು ಕಟ್ಟಡ ಬಳಕೆಗೆ ಡಿ.ಸಿ. ಸೂಚನೆ

ಕಲಬುರಗಿ.ಏ.22: ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಗುರುವಾರ ಜಿಮ್ಸ್ ಆವರಣದ ಟ್ರಾಮಾ ಸೆಂಟರ್ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನವಜಾತ ಶಿಶು ಮಕ್ಕಳ ಆರೈಕೆ ಕೇಂದ್ರಕ್ಕೆ (ಎಸ್.ಎನ್.ಸಿ.ಯು) ಭೇಟಿ ನೀಡಿದರು.

ನಗರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಇಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದ್ದು, ವಿದ್ಯುತ್ತೀಕರಣ ಸೇರಿದಂತೆ ರೋಗಿಗಳ ಚಿಕಿತ್ಸೆಗೆ ಪೂರಕವಾಗಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಕೆ.ಅರ್.ಐ.ಡಿ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಈ‌ ಸಂದರ್ಭದಲ್ಲಿ ಜೆಸ್ಕಾಂ ಎಂ.ಡಿ.ರಾಹುಲ ಪಾಂಡ್ವೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಕೆ.ಅರ್.ಐ.ಡಿ.ಎಲ್. ಮತ್ತು ಜಿಮ್ಸ್ ಅಧಿಕಾರಿಗಳು ಇದ್ದರು.