ಕೋವಿಡ್ ಲಸಿಕಾ ಕೇಂದ್ರಕ್ಕೆ ಸಚಿವ ಅಂಗಾರ ಭೇಟಿ-ಮಾದರಿ ಶಾಲೆಯಲ್ಲಿನ ಲಸಿಕಾ ಕೇಂದ್ರ ಪುರಭವನಕ್ಕೆ ಸ್ಥಳಾಂತರಿಸಲು ಸೂಚನೆ

ಸುಳ್ಯ , ಮೇ.೧- ಸುಳ್ಯ ಜ್ಯೋತಿ ವೃತ್ತದಲ್ಲಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಾಚರಿಸುವ ಕೋವಿಡ್ ಲಸಿಕಾ ಕೇಂದ್ರಕ್ಕೆ ಸಚಿವ ಎಸ್.ಅಂಗಾರ ಗುರುವಾರ ಭೇಟಿ ನೀಡಿದರು.
ಕೇಂದ್ರದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದ ಅವರು ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಟೆದರು.ಮಾದರಿ ಶಾಲೆಯ ಲಸಿಕಾ ಕೇಂದ್ರವನ್ನು ಪುರಭವನಕ್ಕೆ ಸ್ಥಳಾಂತರ ಮಾಡಲು ಸಚಿವರು ಸೂಚನೆ ನೀಡಿದರು. ಶಾಲೆಯಲ್ಲಿ ಸ್ಥಳಾವಕಾಶದ ಕೊರತೆ ಇದೆ. ಆದುರಿಂದ ವಿಶಾಲವಾದ ಸ್ಥಳಾವಕಾಶ ಮತ್ತು ಪಾಕಿಂಗ್ ಮತ್ತಿತರ ಸೌಕರ್ಯ ಇರುವ ಪುರಭವನಕ್ಕೆ ಲಸಿಕಾ ಕೇಂದ್ರವನ್ನು ಸ್ಥಳಾಂತರ
ಮಾಡಲು ಕ್ರಮ ಕೈಗೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ಲಸಿಕೆಗಳು ಅಗತ್ಯಕ್ಕೆ ತಕ್ಕಂತೆ ಲಭ್ಯವಿದೆ ಎಂದು ಹೇಳಿದ ಸಚಿವರು ಕೋವಿಡ್ ಲಸಿಕೆಯನ್ನು ಎಲ್ಲರೂ ಖಡ್ಡಾಯವಾಗಿ ಪಡೆದುಕೊಳ್ಳಬೇಕು. ಯಾವುದೇ ಭಯ, ಅಂಜಿಕೆ ಇಲ್ಲದೆ ಲಸಿಕೆ ಪಡೆದುಕೊಳ್ಳಿ ಎಂದು ಸಚಿವರು ಕರೆ ನೀಡಿದರು. ಮೇ.೧ರಿಂದ ೧೮ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ. ಅದಕ್ಕಾಗಿ ಕೋವಿಡ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.