ಕೋವಿಡ್ ಲಸಿಕೆ: ಅನಗತ್ಯ ಭಯಬೇಡ: ಚನಶೆಟ್ಟಿ

ಬೀದರ:ಮೇ.4: ಗ್ರಾಮೀಣ ಭಾಗದ ಜನರು ಕೋವಿಡ್ ಲಸಿಕೆ ಬಗ್ಗೆ ಅನಗತ್ಯ ಭಯಪಡಬಾರದು ಎಂದು ಮಾಜಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.

ತಾಲ್ಲೂಕಿನ ಸಂಗೋಳಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಲಸಿಕೆ ಪಡೆದುಕೊಂಡು ಅವರು ಮಾತನಾಡಿದರು.

‘ಲಸಿಕೆ ಪಡೆದುಕೊಳ್ಳುವುದರಿಂದ ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಬೀರುವುದಿಲ್ಲ. ಲಸಿಕೆ ಅತ್ಯಂತ ಸುರಕ್ಷಿತವಾಗಿದೆ. ಗ್ರಾಮೀಣ ಭಾಗದ ಎಲ್ಲ ಜನರು ಲಸಿಕೆ ಪಡೆದುಕೊಂಡು ಆರೋಗ್ಯವಂತರಾಗಿ ಬಾಳಬೇಕು ಎಂದು ತಿಳಿಸಿದರು.

ಕೊರೊನಾ ಹರಡುವುದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.