ಕೋವಿಡ್ ಲಸಿಕೆ ಪಡೆದುಕೊಂಡ ಹೈಕೋರ್ಟ್ ಪೀಠದ ನ್ಯಾಯಾಧೀಶರು

ಕಲಬುರಗಿ.ಏ.7:ಮಂಗಳವಾರ ನಗರದ ಜಿಮ್ಸ್ ಅಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಕಲಬುರಗಿಯ ನ್ಯಾಯಾಧೀಶರಾದ ನ್ಯಾ. ಬಿ.ಎಮ್. ಶ್ಯಾಮ್‍ಪ್ರಸಾದ್, ನ್ಯಾ. ಶಿವಶಂಕರ ಅಮರಣ್ಣವರ, ನ್ಯಾ. ವಿ. ಶ್ರೀಶಾನಂದ, ನ್ಯಾ. ಹಂಚಾಟೆ ಸಂಜೀವಕುಮಾರ ಹಾಗೂ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ವಿಜಯ ಅವರು ಕೋವಿಡ್ ಲಸಿಕೆ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ಯಾ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಪ್ರಭುಲಿಂಗ ಮಾನಕರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.