ಕೋವಿಡ್ ಲಸಿಕೆ ವಿತರಣೆಗೆ ಸಕಲ ಸಿದ್ಧತೆ

ಕಲಬುರಗಿ,ಡಿ.28-ಕೋವಿಡ್ ಲಸಿಕೆ ವಿತರಣೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತ ಈಗಾಗಲೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜಾ.ಪಿ.ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ ಮತ್ತು 50 ವರ್ಷ ಮೇಲ್ಪಟ್ಟವರಿಗೆ ಲಸಕೆ ನೀಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮುಂದಿನ ತಿಂಗಳಲ್ಲಿ ಲಸಕೆ ನೀಡುವ ಕಾರ್ಯಕ್ರಮ ಪ್ರಾರಂಭಗೊಳ್ಳುವ ಸಾಧ್ಯತೆಗಳಿವೆ. ಲಸಿಕೆ ನೀಡವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದರು.
ಈಗಾಗಲೆ ಆರೋಗ್ಯ ಇಲಾಖೆಯ ಸಿಬ್ಬಂದಿಯ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿ ಕೊಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 15 ಸಾವಿರ ಜನ ಆರೋಗ್ಯ ಸಿಬ್ಬಂದಿ ಕರ್ತವ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ಮಾಧ್ಯಮದವರನ್ನು ಸಹ ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ ಮೊದಲ ಹಂತದಲ್ಲಿ ಲಸಕೆ ವಿತರಿಸಲು ಫ್ರಂಟ್ ಲೈನ್ ವರ್ಕರ್ಸ್ ಪಟ್ಟಿಯಲ್ಲಿ ಹೆಸರು ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.
ಒಂದುವರೆ ತಿಂಗಳಿಂದ ಜಿಲ್ಲೆಗೆ 15 ಜನ ಯುಕೆಯಿಂದ ಆಗಮಿಸಿದ್ದು, ಅವರೆಲ್ಲರ ತಪಾಸಣೆ ನಡೆಸಲಾಗಿದೆ. ಮತ್ತು ಅವರ ಸಂಪರ್ಕಕ್ಕೆ ಬಂದವರ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಎಲ್ಲರ ವರದಿಯೂ ನೆಗೆಟಿವ್ ಬಂದಿದೆ. ಸದ್ಯ ಜಿಲ್ಲೆಯಲ್ಲಿ ಕೊರೊನಾ ರೂಪಾರಂತರ ವೈರಸ್ ನಿಂದ ಯಾವುದೇ ತೊಂದರೆ ಇಲ್ಲ ಎಂದರು.
ಜಿಲ್ಲೆಯಲ್ಲಿ ಪ್ರತಿನಿತ್ಯ ಸರಾಕರಿ 15 ರಿಂದ 20 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದರು.