ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಅಸಾಮಾನ್ಯ ಕನ್ನಡತಿ ನಿರತ

ತುಮಕೂರು, ಏ. ೨೭- ಕೋವಿಡ್ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಅಂತಿಮ ದರ್ಶನ ಮಾಡಲು ಕುಟುಂಬಸ್ಥರು, ಸಂಬಂಧಿಕರೆ ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ನಗರದಲ್ಲಿ ಮಹಿಳೆಯೊಬ್ಬರು ಕೋವಿಡ್‌ನಿಂದ ಸಾವನ್ನಪ್ಪಿತ್ತಿರುವವರ ಅಂತ್ಯಸಂಸ್ಕಾರ ನೆರವೇರಿಸುವ ಕಾರ್ಯದಲ್ಲಿ ನಿರತರಾಗುವ ಮೂಲಕ ಸಾರ್ಥಕ ಕಾಯಕಕ್ಕೆ ಮುಂದಾಗಿದ್ದಾರೆ.
ಅಸಾಮಾನ್ಯ ಕನ್ನಡತಿ ಪ್ರಶಸ್ತಿ ಪುರಸ್ಕೃತೆ ಯಶೋಧಾ ಎಂಬುವವರೇ ಈ ಸಾರ್ಥಕ ಕಾಯಕದಲ್ಲಿ ನಿರತರಾಗಿರುವ ಮಹಿಳೆ.
ನಗರದ ಗಾರ್ಡನ್ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ೭ ವರ್ಷಗಳಿಂದ ಯಶೋಧಾ ಅವರು ಶವ ಸಂಸ್ಕಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಸದ್ಯ ಎದುರಾಗಿರುವ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಶವಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸಲು ಸಂಬಂಧಿಕರು ಹಿಂದೇಟು ಹಾಕುವಂತಾಗಿದೆ. ಆದರೆ ಯಶೋಧಾ ಅವರು ಇದ್ಯಾವುದನ್ನು ಗಮನದಲ್ಲಿಟ್ಟುಕೊಳ್ಳದೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೋವಿಡ್‌ನಿಂದ ಮೃತಪಟ್ಟ ಶವಗಳ ಅಂತ್ಯಸಂಸ್ಕಾರ ಕಾರ್ಯದಲ್ಲಿ ತೊಡಗಿದ್ದಾರೆ. .
ಕೋವಿಡ್‌ನಿಂದ ಮೃತಪಟ್ಟವರಿಗೆ ಅಂತ್ಯಸಂಸ್ಕಾರ ನೆರವೇರಿಸಲು ಟೊಂಕ ಕಟ್ಟಿರುವ ಯಶೋಧಾ ಅವರು ಬೆಳಿಗ್ಗೆ ೬ ರಿಂದ ರಾತ್ರಿ ೧೦ ರವರೆಗೂ ಸೌದೆ ಒಲೆ ಮೂಲಕ ಶವ ಸುಡುವ ಕಾರ್ಯದಲ್ಲಿ ತೊಡಗಿದ್ದಾರೆ. ೨೫ ದಿನಗಳಿಂದ ದಹಿಸುವ ಕೆಲಸ ಮಾತ್ರ ಈಕೆಯದ್ದೇ. ಸದ್ಯ ಒಬ್ಬ ಹುಡುಗ ೫೦ಕ್ಕೂ ಹೆಚ್ಚು ಶವವನ್ನು ದಹಿಸಿದ್ದಾರೆ.