ಕೋವಿಡ್ ಸುರಕ್ಷತೆ ಪಾಲಿಸಿ

ಬೆಂಗಳೂರು,ನ.೧೭- ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಆರಂಭವಾಗಿದ್ದು, ಕಾಲೇಜು ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೆ ಪಾಲಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮನವಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಲೇಜುಗಳು ಪುನರಾರಂಭವಾಗಿರುವುದರಿಂದ ಆತಂಕ ಬೇಡ, ಆದರೆ, ಎಚ್ಚರಿಕೆ ಇರಲಿ, ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಿಕೊಳ್ಳಲು ಮರೆಯದಿರಿ ಎಂದಿದ್ದಾರೆ.
ನಿರ್ಲಕ್ಷ್ಯ ಬೇಡ ಸಚಿವ ಎಸ್‌ಟಿಎಸ್
ಇಂದಿನಿಂದ ಕಾಲೇಜುಗಳು ಆರಂಭವಾಗಿವೆ. ಶೈಕ್ಷಣಿಕ ದೃಷ್ಠಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಹಾಗಾಗಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ವ್ಯಕ್ತಿಗತ ಅಂತರ ಕಾಪಾಡಿಕೊಂಡು ಜಾಗೃತೆಯಿಂದ ಆರೋಗ್ಯ ಕಾಪಾಡಿಕೊಳ್ಳುವಂತೆ ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.