ಕೋವಿಡ್ ಸೊಂಕು ಜಾಗೃತಿ ಜಾಥಕ್ಕೆ ನ್ಯಾಯಾಧೀಶರು ಚಾಲನೆ

ಲಿಂಗಸುಗೂರು.ಏ.೨೦-ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ, ಶಿಶು ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾರ್ವಜನಿಕರಿಗೆ ಕೋವಿಡ್ ಸೊಂಕು ಹಾಗೂ ಲಸಿಕೆ ಬಗ್ಗೆ ಜಾಗೃತಿ ಜಾಥಕ್ಕೆ ಸ್ಥಳೀಯ ಜೆಎಂಎಫ್‌ಸಿ ಸಿವಿಲ್ ಪ್ರಧಾನ ನ್ಯಾಯಾಧೀಶ ಸಂದೀಪ್ ಪಾಟೀಲ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು. ಹೊರಗೆಡೆಯಿಂದ ಮನೆಗೆ ಹೋದ ತಕ್ಷಣ ಸ್ಯಾನಿಟೈಸರ್‌ನಿಂದ ಕೈತೊಳೆದುಕೊಳ್ಳಬೇಕು. ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಸಿಕೊಂಡು ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಕರೆ ನೀಡಿದರು.
ಹೆಚ್ಚುವರಿ ನ್ಯಾಯಾಧೀಶ ಮಂಜುನಾಥ ಪಾನಘಂಟಿ, ಸಾರ್ವಜನಿಕರ ಆಸ್ಪತ್ರೆ ಮುಖ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ್, ಸಿಡಿಪಿಓ ಶರಣಮ್ಮ ಕಾರನೂರು, ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ, ಪ್ರಾಣೇಶ ಹಾಗೂ ಇನ್ನಿತರಿದ್ದರು.