ಕೋವಿಡ್ ಸೋಂಕಿತರಿಗೆ ಸಮರ್ಪಕ ಆಕ್ಸಿಜನ್ ಪೂರೈಸಲು ಆಗ್ರಹ

ದಾವಣಗೆರೆ.ಮೇ.೧೯: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರಿಗೆ ರ‍್ಕಾರ ಆಕ್ಸಿಜನ್ ಪೂರೈಸಬೇಕು. ಇಲ್ಲದಿದ್ದರೆ, ಸೋಂಕಿತರ ಸಾವಿನ ಹೊಣೆಯನ್ನು ರ‍್ಕಾರವೇ ಹೊರಬೇಕಾಗುತ್ತದೆ ಎಂದು ಕೆಪಿಸಿಸಿ ವಕ್ತಾರರಾದ ಡಿ.ಬಸವರಾಜ್ ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ಮಹಾಮಾರಿಯ ಕರಾಳ ಛಾಯೆ ಗ್ರಾಮೀಣ ಪ್ರದೇಶಗಳಲ್ಲೂ ಆವರಿಸಿದೆ. ಹೀಗಾಗಿ, ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಸಕಾ೯ರಿ ಆಸ್ಪತ್ರೆಯಲ್ಲಿ ಬೆಡ್ ಸಿಗದ ಕಾರಣ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.ಆದರೆ, ಈ ಸೋಂಕಿತರಿಗೆ ಆಕ್ಸಿಜನ್ ಸಿಗದ ಕಾರಣ ನಮ್ಮ ಆಸ್ಪತ್ರೆಗಳಿಂದ ಡಿಸ್ಚರ‍್ಜ್ ಮಾಡಿಸಿಕೊಂಡು ಬೇರೆ ಆಸ್ಪತ್ರೆಗಳಿಗೆ ಹೋಗಿ ಎಂಬುದಾಗಿ ರೋಗಿ ಕಡೆಯವರಿಗೆ ಆಸ್ಪತ್ರೆಯವರು ಹೇಳುತ್ತಿದ್ದಾರೆ. ಹೀಗಾಗಿ, ಸೋಂಕಿತರು ಮತ್ತವರ ಸಂಬಂಧಿಕರು ಪರದಾಡುವ ಪರಿಸ್ಥಿತಿ ನರ‍್ಮಾಣವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಸಂವಿಧಾನದ 21ನೇ ವಿಧಿ ಅನ್ವಯ ಪ್ರತಿಯೊಬ್ಬ ನಾಗರಿಕನಿಗೂ ಆರೋಗ್ಯ ಸೇವೆ ಕಲ್ಪಿಸಬೇಕಾಗಿರುವುದು ರ‍್ಕಾರದ ಆದ್ಯ ರ‍್ತವ್ಯವಾಗಿದೆ. ಆದ್ದರಿಂದ ತಕ್ಷಣವೇ ರ‍್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಪೂರೈಸುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲದಿದ್ದರೆ, ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಸಾವಿನ ಹೊಣೆಯನ್ನು ನೇರವಾಗಿ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.