ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ!

ಶಿವಮೊಗ್ಗ, ಎ. ೨೫: ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕಿತರ ಸಂಖ್ಯೆ ಏರುತ್ತಿದ್ದು, ಎ. ೨೪ ರಂದು ಜಿಲ್ಲೆಯ ಏಳು ತಾಲೂಕುಗಳಲ್ಲಿ ೩೧೬ ಜನರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಸೋಂಕಿನಿಂದ ಮೂವರು ಅಸುನೀಗಿದ್ದಾರೆ.
ಉಳಿದಂತೆ ೧೪೯ ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಶನಿವಾರ ಜಿಲ್ಲಾಡಳಿತ ಬಿಡುಗಡೆ ಮಾಡಿದ ದೈನಂದಿನ ಕೋವಿಡ್-೧೯ ಮಾಹಿತಿಯಲ್ಲಿ ತಿಳಿಸಿದೆ.
ಶನಿವಾರ ಜಿಲ್ಲೆಯಲ್ಲಿ ೨೩೭೩ ಸ್ಯಾಂಪಲ್ಸ್’ಗಳನ್ನು ಸಂಗ್ರಹಿಸಲಾಗಿದ್ದು, ಇದರಲ್ಲಿ ೧೬೮೪ ನೆಗೆಟಿವ್ ವರದಿ ಬಂದಿತ್ತು. ಜಿಲ್ಲೆಯ ಇತರೆ ತಾಲೂಕುಗಳಿಗೆ ಹೋಲಿಸಿದರೆ, ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವುದು ಕಂಡುಬಂದಿದೆ.
ಶಿವಮೊಗ್ಗ ತಾಲೂಕಿನಲ್ಲಿ ೧೨೩, ಭದ್ರಾವರತ ೭೯, ಶಿಕಾರಿಪುರ ೮, ತೀರ್ಥಹಳ್ಳಿ ೭, ಸೊರಬ ೨೬, ಸಾಗರ ೨೯, ಹೊಸನಗರ ೨೮ ಹಾಗೂ ಬೇರೆ ಜಿಲ್ಲೆಗಳಿಂದ ಆಗಮಿಸಿದ ೧೪ ಜನರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ.