ಕೋವಿಡ್ ಸೋಂಕಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ,ಜೂ.9-ಕೋವಿಡ್ ಸೋಂಕಿತ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಪಿಂಟು ಎಂಬಾತನೆ ಮಧ್ಯರಾತ್ರಿ ಕೋವಿಡ್ ಸೋಂಕಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಜಿಮ್ಸ್ ಆಸ್ಪತ್ರೆಯ ಜಯದೇವ ಹೃದ್ರೋಗ ಕೇಂದ್ರದ ರೂಮ್ ನಂ.429ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಈ ಕೃತ್ಯಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ.
ಮಧ್ಯರಾತ್ರಿ ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಬಲತ್ಕಾರಕ್ಕೆ ಮುಂದಾಗಿದ್ದಾನೆ. ಇದರಿಂದ ಎಚ್ಚರಗೊಂಡ ಮಹಿಳೆ ಚೀರಿದಾಗ ಅಕ್ಕಪಕ್ಕದವ ರೋಗಿಗಳು ಕೂಡ ಎಚ್ಚರಗೊಂಡಿದ್ದು, ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಮಹಿಳೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.
ನಂತರ ವಿಷಯ ತಿಳಿದ ಬ್ರಹ್ಮಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಪಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಪಿಂಟು ಖಾಸಗಿ ಅಂಬ್ಯುಲೆನ್ಸ್ ಚಾಲಕನಾಗಿದ್ದ ಮತ್ತು ಜಿಮ್ಸ್ ಆಸ್ಪತ್ರೆಯಲ್ಲಿಯೇ ಕೋವಿಡ್ ನಿಂದ ಮೃತಪಟ್ಟವರ ಶವ ಪ್ಯಾಕ್ ಮಾಡುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಪುರ ಪಿಐ ಕಪೀಲ್ ದೇವ್ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.