
ನವದೆಹಲಿ,ಮಾ.31- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸೋಂಕು ಹೆಚ್ಚಳದ ಬಗ್ಗೆ ಜನರಲ್ಲಿ ಆತಂಕ ಬೇಡ, ಪರಿಸ್ಥಿತಿ ಎದುರಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
“ಸಂಪೂರ್ಣ ಸಿದ್ಧತೆ, ಚಿಂತಿಸುವ ಅಗತ್ಯವಿಲ್ಲ”.ಈಗಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳುವ ಜೊತೆಗೆ ಅಣಕು ಡ್ರಿಲ್ ಗೂ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರಡ.
ನಿನ್ನೆ 30 ರಂದು 295 ಪ್ರಕರಣಗಳು ವರದಿಯಾಗಿವೆ ಎಂದು ಅವರು ಮಾಹಿತಿ ನೀಡಿದ ಅವರು ರಾಷ್ಟ್ರ ರಾಜಧಾನಿಯ ನಿವಾಸಿಗಳು ಕೋವಿಡ್ ಪ್ರಕರಣಗಳ ಉಲ್ಬಣದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಇಂದು ಹೇಳಿದ್ದಾರೆ,
ಯಾವುದೇ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧವಾಗಿದೆ. ದೆಹಲಿಯ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 7,986 ಹಾಸಿಗೆಗಳು ಸಿದ್ಧವಾಗಿವೆ, ಸರ್ಕಾರ ಸಾಕಷ್ಟು ಆಮ್ಲಜನಕ ಸಿಲಿಂಡರ್‌ಗಳನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ಕೋವಿಡ್ ಸೋಂಕಿನ ಉಪ ತಳಿಗಾಳದ ಎಕ್ಸ್‌ಬಿಬಿ 1.16 ರೂಪಾಂತರದಿಂದ ದೇಶದಲ್ಲಿ ಸೋಂಕು ಹೆಚ್ಚುತ್ತಿದೆ. ಸದ್ಯ 48 ಪ್ರತಿಶತವನ್ನು ಹೊಂದಿದೆ ಎಂದು ಹೇಳಿದ್ದಾರಡ.
ಕೋವಿಡ್ ಸೋಂಕು ವೇಗವಾಗಿ ಹರಡುತ್ತದೆ ಆದರೆ ತೀವ್ರವಾಗಿಲ್ಲ”.ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಸೋಂಕು ಎದುರಿಸಲು ಸಿದ್ದತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ವೈರಸ್‌ನ ಕೊರೊನಾ ಸೋಂಕಿನ ಸಾದ್ಯತೆಯನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಸಿದ್ದತೆಗಳ ಬಗ್ಗೆ ಸಂಪೂರ್ಣ ನಿಗಾ ಇರಿಸಿದೆ.ಯಾವುದೇ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಗುರುತಿಸಲು ಎಲ್ಲಾ ಪ್ರಕರಣಗಳನ್ನು ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗುತ್ತಿದೆ ಎಂದು ಅವರು ಅವರು ಮಾಹಿತಿ ನೀಡಿದ್ದಾರೆ.