ಕೋವಿಡ್ ಹಿನ್ನಲೆ ರಾಜ್ಯೋತ್ಸವ ಸರಳವಾಗಿ ಆಚರಿಸಲು ನಿರ್ಧಾರ

ವಿಜಯಪುರ ಅ.27: ಕೋವಿಡ್ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಇದೇ ನವ್ಹೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ನಿರ್ದರಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನಗರದ ಅಕ್ಕಮಹಾದೇವಿ ಮಹಿಳಾ ವಿವಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿಲಾಗಿದೆ.

ಅದರಂತೆ ರಾಜ್ಯೋತ್ಸವ ಅಂಗವಾಗಿ ಕೋವಿಡ್ ವಾರಿಯರ್‍ಗಳಿಗೆ, ವಿಶೇಷವಾಗಿ ಆಸ್ಪತ್ರೆಗಳ ವೈದ್ಯ ಸಿಬ್ಬಂದಿಗಳು, ಲ್ಯಾಬ್ ಟೆಕ್ನಿಷಿಯನ್, ಪೆÇಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರಿಗೆ ಹಾಗೂ ಇಲಾಖಾವಾರು ಅತ್ಯುತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗುರುತಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಕಲೆ, ಸಾಹಿತ್ಯ ಮತ್ತು ಸಂಸ್ಕøತಿ ಸಾಧಕರಿಗೆ ಸನ್ಮಾನಿಸಲು ನಿರ್ಧರಿಸಲಾಗಿದ್ದು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಇರುವ ಸಮಿತಿ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತಂತೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಹಿನ್ನಲೆಯಲ್ಲಿ ಈ ಬಾರಿ ರಾಜ್ಯೋತ್ಸವ ಮೆರವಣಿಗೆ, ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮಗಳು, ಸ್ತಬ್ದಚಿತ್ರಗಳ ಮೆರವಣಿಗೆ, ಸಾಮುಹಿಕ ಮಕ್ಕಳ ನೃತ್ಯ ಕಾರ್ಯಕ್ರಮಗಳು ಹಮ್ಮಿಕೊಳ್ಳದಿರಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಗೊವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು ಸೂಕ್ತ ಸಲಹೆ ಸೂಚನೆ ನೀಡಿದರು.