ಕೋವಿಡ್ ಹಿನ್ನೆಲೆ: ಈದ್ ಮಿಲಾದ್ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ಡಿ.ಸಿ. ಸೂಚನೆ

ಕಲಬುರಗಿ,ಅ.13:ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇದೇ ಅಕ್ಟೋಬರ್ 20 ರಂದು ಕಲಬುರಗಿ ಜಿಲ್ಲೆಯಾದ್ಯಂತ ಈದ್ ಮಿಲಾದ್ (ಮಿಲಾದುನ್ನಬಿ) ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಜಿಲ್ಲಾಡಳಿತವು ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಕಲಬುರಗಿ ಜಿಲ್ಲೆಯಾದ್ಯಂತ ಈದ್ ಮಿಲಾದ (ಮಿಲಾದುನ್ನಬಿ) ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸರಳ ರೀತಿಯಲ್ಲಿ ಆಚರಿಸುವುದರ ಜೊತೆಗೆ ಸರ್ಕಾರದ ಆದೇಶದಲ್ಲಿ ತಿಳಿಸಿದಂತೆ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದ್ದಾರೆ.
ಈದ್ ಮಿಲಾದ್ (ಮಿಲಾದುನ್ನಬಿ) ಹಬ್ಬವನ್ನು ಆಚರಿಸುವ ಸಂಬಂಧದಲ್ಲಿ ಪಾಲಿಸಬೇಕಾದ ಸರ್ಕಾರದ ಮಾರ್ಗಸೂಚಿಯ ವಿವರ ಇಂತಿದೆ. ಕೋವಿಡ್-19 ವೈರಾಣು ಸೋಂಕು ಹರಡುವುದನ್ನು ತಡೆಗಟ್ಟವ ನಿಟ್ಟಿನಲ್ಲಿ ಪ್ರಸಕ್ತ ವರ್ಷದ ಈದ್ ಮಿಲಾದ ಹಬ್ಬವನ್ನು ಅತ್ಯಂತ ಸರಳವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಬೇಕು. ಜಿಲ್ಲೆಯಾದ್ಯಂತ ಇದೇ ಅಕ್ಟೋಬರ್ 20 ರಂದು ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಸಾಮೂಹಿಕ ಮೆರವಣಿಗೆ ನೀμÉೀಧಿಸಿದೆ.
ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಭೆ-ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.
ಮಸೀದಿಗಳಲ್ಲಿ ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19ರ ಶಿμÁ್ಟಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳವುದರ ಮೂಲಕ ಈದ್ ಮಿಲಾದ ಆಚರಣೆ ಮಾಡಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು/ಡಿಜಿಟಲ್ ಸೌಂಡ್ ಸಿಸ್ಟಮ್ (ಡಿಜೆ) ಬಳಕೆಯನ್ನು ನಿμÉೀಧಿಸಲಾಗಿದೆ. ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸಬೇಕು. ಮುಖಗವಸನ್ನು ಧರಿಸದೆ ಸೇರತಕ್ಕಂತಹ ಸಾರ್ವಜನಿಕರ ವಿರುದ್ಧ ನಿಯಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ.
60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಹಬ್ಬವನ್ನು ಆಚರಿಸಬೇಕು. ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸೇಷನ್ ಹಾಗೂ ಹ್ಯಾಂಡ್‍ವಾμï ನೊಂದಿಗೆ ಕೈತೊಳೆಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಕೋವಿಡ್-19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬೇಕು.
ಕೋವಿಡ್-19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಕೈಗಳನ್ನು ಸೋಪು ಮತ್ತು ಸ್ಯಾನಿಟೈಸರ್‍ಗಳಿಂದ ಶುಚಿಗೊಳಿಸಬೇಕು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಿಸಿಕೊಳ್ಳಬೇಕು. ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡಬಾರದು. ಮಸೀದಿ ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿಮಹಲ್ ಮತ್ತಿತ್ತರ ತೆರೆದ ಜಾಗಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಸುವಂತಿಲ್ಲ.
ಖಬರಸ್ತಾನದಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.
ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಸಂಬಂಧದಲ್ಲಿ ಪಾಲಿಸಬೇಕಾದ ಸರ್ಕಾರದ ಮಾರ್ಗಸೂಚಿಯ ವಿವರ ಇಂತಿದೆ. ಕೋವಿಡ್-19 ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸಕ್ತ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು. ಜಿಲ್ಲೆಯಾದ್ಯಂತ ಇದೇ ಅಕ್ಟೋಬರ್ 20 ರಂದು ಆಚರಿಸಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂದರ್ಭದಲ್ಲಿ ಸಾಮೂಹಿಕ ಮೆರವಣಿಗೆ ನೀμÉೀಧಿಸಿದೆ.
ಮಹರ್ಷಿ ವಾಲ್ಮೀಕಿ ಜಯಂತಿ ಸಂಬಂಧದ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಭೆ-ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸ್ಥಳಗಳಲ್ಲಿ ಸ್ಯಾನಿಟೈಸೇಷನ್ ಹಾಗೂ ಹ್ಯಾಂಡ್ ವಾμï ನೊಂದಿಗೆ ಕೈತೊಳೆಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು / ಡಿಜಿಟಲ್ ಸೌಂಡ್ ಸಿಸ್ಟಮ್ (ಡಿಜೆ) ಬಳಕೆಯನ್ನು ನಿμÉೀಧಿಸಲಾಗಿದೆ. ಈ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸಬೇಕು ಮತ್ತು ಮುಖಗವಸನ್ನು ಧರಿಸದೆ ಸೇರತಕ್ಕಂತಹ ಸಾರ್ವಜನಿಕರ ವಿರುದ್ಧ ನಿಯಾನುಸಾರ ಕ್ರಮ ಕೈಗೊಳ್ಳಬೇಕು. 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಇದ್ದು, ಈ ಜಯಂತಿಯನ್ನು ಆಚರಿಸಬೇಕು.
ಮೇಲ್ಕಂಡ ಹೊರಡಿಸಲಾಗಿರುವ ರಾಷ್ಟ್ರೀಯ ನಿರ್ದೇಶನಗಳು, ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಾಹಣಾ ಕಾಯ್ದೆ-2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.