ಕೋವಿಡ್ ಹಿನ್ನೆಲೆ : ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಪ್ರವೇಶ ನಿರ್ಭಂದ

ವಿಜಯಪುರ, ಏ.20-ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರೀಯ ಪುರಾತತ್ವ ಇಲಾಖೆಯಡಿ ಬರುವ ಎಲ್ಲಾ ಸ್ಮಾರಕಗಳನ್ನು ದಿನಾಂಕ 15-05-2021 ವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಪಿ.ಸುನೀಲ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ವಿಜಯಪುರ ಜಿಲ್ಲೆಯ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಕೇಂದ್ರೀಯ ಸಂರಕ್ಷಿತ ಸ್ಮಾರಕಗಳಿಗೆ ದಿನಾಂಕ 15-05- 2021 ವರೆಗೆ ಅಥವಾ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಪ್ರವೇಶವನ್ನು ನಿಬರ್ಂಧಿಸುವುದರಿಂದ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಅವರು ಆದೇಶಿಸಿದ್ದಾರೆ.