ಕೋವಿಡ್: ಹೆಚ್ಚಿನ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ


ಗದಗ, ಜ.2-: ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಸೋಂಕು ನಿಯಂತ್ರಣಕ್ಕೆ ಇನ್ನೂ ಹೆಚ್ಚಿನ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೆಶ್ ಬಾಬು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಆರೋಗ್ಯಾಧಿಕಾರಿಗಳಿಗೆ ನಿಗದಿಪಡಿಸಲಾದ ಗುರಿಗಳನ್ನು ಪೂರ್ಣಗೊಳಿಸಿ ಮಾದರಿ ಸಂಗ್ರಹ ಹಾಗೂ ಪರೀಕ್ಷೆಗಳನ್ನು ತ್ವರಿತಗತಿಯಲ್ಲಿ ಮಾಡಲು ತಿಳಿಸಿದರು. ಗ್ರಾಮ ಪಂಚಾಯತ ಚುನಾವಣೆಗಳು ಪೂರ್ಣಗೊಂಡಿದ್ದು ಜೊತೆಗೆ ಶಾಲಾ ಕಾಲೇಜುಗಳು ಪ್ರಾರಂಭಗೊಂಡ ಹಿನ್ನಲೆಯಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲು ತಿಳಿಸಿದರು. ಈ ಮುಂದಿನ ಹದಿನೈದು ದಿನಗಳು ಅತ್ಯಂತ ಮಹತ್ವದಾಗಿದ್ದು ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದರು. ಸೋಂಕಿತರ ಪ್ರಾಥಮಿಕ ಹಾಗೂ ದ್ವೀತೀಯ ಸಂಪರ್ಕಿತರ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡಿ ಪರೀಕ್ಷೆಗೆ ಒಳಪಡಿಸಬೇಕು. ತಾಲೂಕು ಮಟ್ಟದಲ್ಲಿ ಪತ್ತೆಯಾಗುವ ಸೋಂಕಿತರಿಗೆ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅನುಕೂಲವಾಗುವಂತೆ ಸುಸಜ್ಜಿತವಾಗಿಟ್ಟುಕೊಳ್ಳುವಂತೆ ತಿಳಸಿದರು. ಪ್ರಸಕ್ತ ಮಾಹೆಯಲ್ಲಿ ಪಲ್ಸ ಪೆÇಲಿಯೋ ಅಭಿಯಾನ ಪ್ರಾರಂಭವಾಗುತ್ತಿದ್ದು ಈ ಹಿನ್ನಲೆಯಲಿ ಪೆÇೀಲಿಯೋ ಲಸಿಕೆ ಸಂಗ್ರಹಿಸಿಟ್ಟುಕೊಳ್ಳಲು ಅಗತ್ಯದ ಸಿದ್ದತೆ ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯ ಯಾವುದೇ ಮಕ್ಕಳು ಪೆÇೀಲಿಯೋ ಲಸಿಕೆಯಿಂದ ವಂಚಿತರಾಗದಂತೆ ಅಗತ್ಯದ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗ್ರಾಮ ಪಂಚಾಯತ ಚುನಾವಣೆಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವಂತೆ ತಿಳಿಸಿದರು. ಕಳೆದ ಸಾಲಿನ ನೆರೆಯಿಂದ ನರಗುಂದ ಹಾಗೂ ರೋಣ ತಾಲೂಕಿನ ಕೆಲ ಗ್ರಾಮಗಳು ಜಲಾವೃತ್ತವಾಗಿದ್ದು ಮುಂದಿನ ಮಳೆಗಾಲ ಪ್ರಾರಂಭವಾಗುವದರೊಳಗಾಗಿ ಗ್ರಾಮಗಳ ಸ್ಥಳಾಂತರಕ್ಕೆ ಅವಶ್ಯಕ ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲು ಕ್ರಮ ಜರುಗಿಸಬೇಕು. ಸ್ಥಳಾಂತರಗೊಳ್ಳಬೇಕಾದ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡದೆ ಇದ್ದಲ್ಲಿ ಹಕ್ಕು ಪತ್ರ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನೆರೆ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ನಿರ್ಮಾಣದ ಕಾರ್ಯದ ವಿವರಗಳನ್ನು ಕೂಡಲೇ ಜಿ.ಪಿ.ಎಸ್ ಮಾಡಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುರುತಿಸಲಾದ ಬೀದಿ ಬದಿ ವ್ಯಾಪಾರಸ್ಥರಿಂದ ಸ್ವೀಕರಿಸಲಾದ ಅರ್ಜಿಗಳನ್ನು ವಿಲೇ ಮಾಡಲು ಕ್ರಮ ಜರುಗಿಸಬೇಕು. ಅತೀಯಾದ ಮಳೆಯಿಂದಾಗಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಮನೆಗಳು ಹಾನಿಯಾದ ಬಗ್ಗೆ ವರದಿಯಾಗಿದ್ದು ಇವುಗಳ ಜಿ.ಪಿ.ಎಸ್. ಕಾರ್ಯವನ್ನು ಶೀಘ್ರವಾಗಿ ಜರುಗಿಸಬೇಕು. ನಿವೇಶನ ಹಂಚಿಕೆಯಡಿ ಸಲ್ಲಿಕೆಯಾದ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಕಾರ್ಯವನ್ನು ಶೀಫ್ರವೇ ಪೂರ್ಣಗೊಳಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿ ನಿವೇಶನ ಹಂಚಿಕೆ ಮಾಡಲು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್. ಗದಗ-ಬೆಟಗೇರಿ ನಗರ ಸಭೆ ಪೌರಾಯುಕ್ತ ರಮೇಶ ಜಾದವ, ತಹಶೀಲ್ದಾರರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಸ ಬಸರಿಗಿಡದ, , ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.