ಕೋವಿಡ್ ಹೋಮ್ ಐಸೋಲೆಷನ್ ಇರುವ ಮನೆಗೆ ಸ್ಟಿಕರ್ ಅಂಟಿಸಲು ಡಿ.ಸಿ ಸೂಚನೆ

ದಾವಣಗೆರೆ,ಮಾ.24; ಕೋವಿಡ್ ವ್ಯಾಪಕ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಸೋಂಕು ದೃಢಪಟ್ಟು ಹೋಂ ಐಸೋಲೇಷನ್‌ನಲ್ಲಿ ಇರುವವರ ಮನೆಗೆ ‘ಕೋವಿಡ್ ಹೋಂ ಐಸೋಲೇಷನ್’ ಎಂಬ ಬರಹವಳ್ಳ ಸ್ಟಿಕರ್ ಅಂಟಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.         ಜಿಲ್ಲಾಡಳಿತ ಭವನದ ಕಚೇರಿ ಸಭಾಂಗದಲ್ಲಿ  ಏರ್ಪಡಿಸಿದ ಜಿಲ್ಲೆಯ ವೈದ್ಯಕೀಯ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು.     ಪ್ರಸ್ತುತ ದಾವಣಗೆರೆ ನಗರದಲ್ಲಿ ಕೋವಿಡ್ ಸೋಂಕು ದೃಢಪಟ್ಟ 28 ಜನ ಹೋಂ ಐಸೋಲೇಷನ್‌ನಲ್ಲಿ ಇದ್ದು, ಇವರು ಹೊರಗಡೆ ಎಲ್ಲಿಯೂ ಓಡಾಡದೆ, ಸಮರ್ಪಕವಾಗಿ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕು.  ಇವರಿಂದ ಬೇರೆಯವರಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.  ಹೀಗಾಗಿ ಎಚ್ಚರಿಕೆ ವಹಿಸುವ ಸಲುವಾಗಿ, ಹಾಗೂ ಆರೋಗ್ಯ ಕಾರ್ಯಕರ್ತರು ಸಮರ್ಪಕ ವೈದ್ಯಕೀಯ ನೆರವು ನೀಡುವ ಸಲುವಾಗಿ, ಹೋಂ ಐಸೋಲೇಷನ್ ಇರುವವರ ಮನೆಗೆ ‘ಕೋವಿಡ್ ಹೋಂ ಐಸೋಲೇಷನ್’ ಎಂಬ ಬರಹವುಳ್ಳ ಸ್ಟಿಕರ್ ಅಂಟಿಸುವAತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.ಪಾಸಿಟಿವಿಟಿ ಹೆಚ್ಚಳ ಆತಂಕ : ಕಳೆದ ತಿಂಗಳು ಕಡಿಮೆ ಸಂಖ್ಯೆಯಲ್ಲಿ ಕಂಡುಬರುತ್ತಿದ್ದ ಕೋವಿಡ್ ಸೋಂಕು ಪ್ರಕರಣಗಳು ಮಾರ್ಚ್ ಮೂರನೆ ವಾರದಲ್ಲಿ ಹೆಚ್ಚಳವಾಗಿರುವುದು ಕಂಡುಬAದಿದೆ.  ಮಾರ್ಚ್ ಎರಡನೆ ವಾದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು 23 ವರದಿಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ. 0.19 ರಷ್ಟು ಇತ್ತು.  ಇದೀಗ ಮಾರ್ಚ್ ಮೂರನೆ ವಾರದಲ್ಲಿ 40 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ಪ್ರಮಾಣ 0.29 ಕ್ಕೆ ಹೆಚ್ಚಳವಾಗಿರುವುದು ಆತಂಕಕಾರಿಯಾಗಿದೆ. ಜಿಲ್ಲೆಯಲ್ಲಿ ನಿಗದಿಗಿಂತಲೂ ಹೆಚ್ಚು ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.  ರೋಗ ಲಕ್ಷಣ ಇರುವವರು ಪರೀಕ್ಷೆಗೆ ಒಳಪಡುತ್ತಿದ್ದಾರೆ ಹೀಗಾಗಿ ಪರೀಕ್ಷೆಯಲ್ಲಿ ಯಾವುದೇ ತೊಂದರೆ ಇಲ್ಲ.  ಶಾಲಾ ಮಕ್ಕಳು ಮತ್ತು ಹಾಸ್ಟೆಲ್ ಮಕ್ಕಳಿಗೆ ನಿಯಮಿತವಾಗಿ ಕೋವಿಡ್ ಪರೀಕ್ಷೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದ್ದು, ಅದರಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಹೇಳಿದರು.  ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷೆಗೆ ಮಾದರಿಯನ್ನು ಸಮರ್ಪಕವಾಗಿ, ಕ್ರಮಬದ್ಧವಾಗಿ ಸಂಗ್ರಹಿಸುತ್ತಿಲ್ಲ ಎಂಬ ದೂರು ಇದೆ.  ಹೀಗಾಗಿ ಮಾದರಿ ಸಂಗ್ರಹಿಸುವವರು, ಕ್ರಮಬದ್ಧವಾಗಿ ಪರೀಕ್ಷೆಗೆ ಮಾದರಿ ಸಂಗ್ರಹಿಸುವAತೆ ಕ್ರಮ ಕೈಗೊಳ್ಳಬೇಕು.  ಸೋಂಕಿತರ ಕನಿಷ್ಟ 15 ಜನ ಪ್ರಾಥಮಿಕ ಹಾಗೂ ಕನಿಷ್ಟ 40 ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಬೇಕು.  ಸೋಂಕಿತರ ಪ್ರಯಾಣ ವಿವರವನ್ನು ಸಂಗ್ರಹಿಸಬೇಕು.  ಒಂದು ವೇಳೆ ವಿವರ ನೀಡಲು ನಿರಾಕರಿಸಿದರೆ ಅಥವಾ ಅಸಹಾಕಾರ ತೋರಿದರೆ ಪೊಲೀಸ್ ನೆರವು ಪಡೆಯುವಂತೆ ಸೂಚನೆ ನೀಡಿದರು.ದಂಡ ವಿಧಿಸಲು ಗುರಿ ನಿಗದಿ : ಕೋವಿಡ್ ಹರಡುವುದನ್ನು ತಡೆಗಟ್ಟಲು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದವರನ್ನು ಪತ್ತೆಹಚ್ಚಿ ದಂಡ ವಿಧಿಸಲು ಜಿಲ್ಲಾಧಿಕಾರಿಗಳು ಗುರಿ ನಿಗದಿಪಡಿಸಿ ಸೂಚನೆ ನೀಡಿದರು.  ಪ್ರತಿ ಪೊಲೀಸ್ ಠಾಣೆಗೆ ನಿತ್ಯ 100 ಜನ ಮಾಸ್ಕ್ ರಹಿತರನ್ನು ಪತ್ತೆಹಚ್ಚಿ ದಂಡ ವಿಧಿಸಲು ಗುರಿ ನಿಗದಿಪಡಿಸಲಾಯಿತು.  ಅದೇ ರೀತಿ ಪ್ರತಿ ವಾರ್ಡ್ಗೆ 10, ಪಟ್ಟಣ ಪ್ರದೇಶದಲ್ಲಿ ನಿತ್ಯ 100, ಗ್ರಾಮ ಪಂಚಾಯತ್ ಮಟ್ಟದಲ್ಲೂ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ್, ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಪ್ರಮೋದ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಆರ್‌ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಶಸ್ತçಚಿಕಿತ್ಸಕ ಡಾ. ಜಯಪ್ರಕಾಶ್, ತಜ್ಞ ವೈದ್ಯರುಗಳಾದ ಡಾ. ಬಾಲು, ಡಾ. ಸುರೇಂದ್ರ, ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರುಗಳು ಉಪಸ್ಥಿತರಿದ್ದು ಅಗತ್ಯ ಸಲಹೆಗಳನ್ನು ನೀಡಿದರು.