ಕೋವಿಡ್-19 ಎರಡನೇ ಅಲೆ ಹಿನ್ನೆಲೆ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಸಾನಿಟೈಸರ್ ಬಳಸಿ, ಮುನ್ನೆಚ್ಚರಿಕೆ ವಹಿಸಿಕೊಳ್ಳಿಃ ಸಚಿವೆ ಜೊಲ್ಲೆ

ವಿಜಯಪುರ, ಏ.30-ಕೋವಿಡ್ ಎರಡನೇ ಅಲೆ ಆರಂಭಗೊಂಡಿದ್ದು, ಈ ಹಿಂದಿಗಿಂತಲೂ 10 ಪಟ್ಟು ವೇಗವಾಗಿ ಈ ಬಾರಿಯ ಕೋವಿಡ್-19 ವೈರಸ್ ಬೆಳೆಯುತ್ತಿದ್ದು, ಈ ಕುರಿತು ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ನಿಯಂತ್ರಣದ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ ಅವರು ಕೋವಿಡ್ 2ನೇ ಅಲೆಯ ಹಿನ್ನೆಲೆಯಲ್ಲಿ ತೀವ್ರ ವೇಗವಾಗಿ ಹಬ್ಬುತ್ತಿರುವ ಈ ರೂಪಾಂತರ ವೈರಸ್ ಇನ್ನೂ ಹೆಚ್ಚು ಪ್ರಭಾವಕಾರಿಯಾಗಿದ್ದು, ಹಿರಿಯರು ಅಲ್ಲದೆ ಚಿಕ್ಕ ಮಕ್ಕಳು ಮತ್ತು ಯುವಕರು ಇದಕ್ಕೆ ಹೆಚ್ಚಿನ ರೀತಿಯಲ್ಲಿ ರೋಗಕ್ಕೆ ತುತ್ತಾಗುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸಾನಿಟೈಸರ್ ತಪ್ಪದೇ ಬಳಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮಾನ್ಯ ಮುಖ್ಯಮಂತ್ರಿಗಳು ಇಂದು ರಾಜ್ಯದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಸರ್ಕಾರವು ಜಾರಿಗೊಳಿಸಿದ ನಿಬರ್ಂಧ ಆಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಜನರಿಗೆ ದಿನನಿತ್ಯದ ಅಗತ್ಯ ವಸ್ತುಗಳು ಹಣ್ಣು-ತರಕಾರಿ ಪಡೆಯಲು ಅವಕಾಶ ನೀಡಿದ್ದರೂ ಸಹ 10 ಗಂಟೆಯ ನಂತರ ಗಂಭೀರ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಜನಸಂದಣಿಯನ್ನು ನಿಯಂತ್ರಿಸುವ ಮೂಲಕ ಕೋವಿಡ್ ವೇಗವಾಗಿ ಹರಡುವುದನ್ನು ನಿಯಂತ್ರಿಸಬೇಕಾದ ಅನಿವಾರ್ಯತೆಯಿದ್ದು, ಈ ದಿಸೆಯಲ್ಲಿ ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿಯೂ ಅಧಿಕಾರಿಗಳ ವಿವಿಧ ತಂಡಗಳನ್ನು ರಚಿಸಿ ಸಮನ್ವಯತೆಯಿಂದ ತಂಡಗಳು ಕಾರ್ಯನಿರ್ವಹಿಸುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಜನರ ಸಹಕಾರವೂ ಇದ್ದು ರೋಗ ನಿಯಂತ್ರಣಕ್ಕೆ ಎಲ್ಲರೂ ಕೂಡಿ ಹೋರಾಡೋಣ ಅದರಂತೆ ಈ ರೋಗ ಬೇಗ ತೊಲಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಅವರು ಹೇಳಿದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲೆಯ ಒಟ್ಟು 18 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಪರಿಣಾಮಕಾರಿಯಾದ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 6 ಕೋವಿಡ್ ಕೇರ್ ಸೆಂಟರ್ ಗಳನ್ನು ಸಹ ಆರಂಭಿಸಲಾಗಿದೆ. ಗ್ರಾಮಾಂತರ ಪ್ರದೇಶಗಳಿಗೆ ಆಗಮಿಸುವ ವಲಸಿಗರನ್ನು ನಿಗಾದಲ್ಲಿ ಇಡಲು ಕೋವಿಡ್ ಕೇರ್ ಸೆಂಟರ್ ಹೆಚ್ಚು ಸಹಕಾರಿಯಾಗಲಿದ್ದು, ಕ್ವಾರೆಂಟೈನ್ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಚೆಕ್ ಪೆÇೀಸ್ಟ್ ಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗಾಗಿ ಸದ್ಯಕ್ಕೆ ರೆಮ್ ಡಿಸಿವರ್ ಲಸಿಕೆಯು ಬಂದಿದ್ದು ಈಗಾಗಲೇ ಖಾಸಗಿ ಆಸ್ಪತ್ರೆಗಳಿಗೆ 2396 ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ 525 ಲಸಿಕೆಗಳನ್ನು ವಿತರಿಸಲಾಗಿದೆ. ಇದರ ಕೊರತೆ ನೀಗಿಸಲು ನಿರಂತರ ಪ್ರಯತ್ನ ಸಹ ನಡೆಸಲಾಗುತ್ತಿದ್ದು. ಕೋವಿಡ್ ಪಾಸಿಟಿವ್ ರೋಗಿಗಳಿಗೆ ಮಾತ್ರ ಈ ಲಸಿಕೆ ಹಾಕಿಸಲು ಕ್ರಮಕೈಗೊಳ್ಳುವಂತೆ ವೈದ್ಯರಲ್ಲಿ ಅವರು ಮನವಿ ಮಾಡಿದರು.
ಅದರಂತೆ ಖಾಸಗಿ ಆಸ್ಪತ್ರೆಗಳ ವೈದ್ಯರು ಗಳು ಕೂಡ ಈ ಲಸಿಕೆಯನ್ನು ಅಗತ್ಯತೆಗೆ ತಕ್ಕಂತೆ ರೋಗಿಗಳ ರೋಗ ನಿರೋಧಕ ಶಕ್ತಿ ಆಧಾರದ ಮೇಲೆ ಪರೀಕ್ಷೆ ನಡೆಸಿ ಈ ಲಸಿಕೆ ನೀಡಬೇಕು.ಅದರಂತೆ ರೆಮ್ ಡಿಸಿವರ್ ಲಸಿಕೆ ಇಲ್ಲದೆ ರೋಗಿ ಮರಣ ಹೊಂದಬಹುದು ಎಂದು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯವಿದ್ದು, ವೈದ್ಯರು ನೀಡುವ ಸಲಹೆಗಳಿಗೆ ತಕ್ಕಂತೆ ಪಡೆಯಲು ಮನವಿ ಮಾಡಿ ,ವೈದ್ಯರು ಸಹ ಅವಶ್ಯಕತೆಗೆ ಅನುಗುಣವಾಗಿ ಬಳಸಬೇಕು. ಮುಂದಿನ ದಿನಗಳಲ್ಲಿ ವಾರದಲ್ಲಿ ಎರಡು ಬಾರಿ ಲಸಿಕೆ ಸರಬರಾಜಿಗೆ ಕೋರಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ಎರಡು ಆಕ್ಸಿಜನ್ ಪ್ಲಾಂಟ್ ಗಳ ಭೇಟಿಯನ್ನು ಸಹ ಹಿರಿಯ ಅಧಿಕಾರಿಗಳು ಮಾಡಿದ್ದು ,ಶೇಕಡಾ 50 ರಷ್ಟು ಆಕ್ಸಿಜನ್ ನಮ್ಮ ಜಿಲ್ಲೆಗೆ ಮೀಸಲಿಡಲು ಸೂಚಿಸಲಾಗಿದೆ. ಇದರ ಕೊರತೆ ನೀಗಿಸಲು ಬಳ್ಳಾರಿ ಮತ್ತು ಹುಬ್ಬಳ್ಳಿಯಿಂದ ಸಮನ್ವಯತೆ ಸಹ ಸಾಧಿಸಲಾಗಿದೆ ಎಂದು ಸಚಿವರು ಕೋರಿದರು.
ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ನಿರ್ವಹಣೆಗಾಗಿ ಬೆಡ್ ಮ್ಯಾನೇಜ್ಮೆಂಟ್ ಪೆÇೀರ್ಟಲ್ ಯಾಪ್ ಸಹ ಆರಂಭಿಸಲಾಗಿದೆ. ಅದರಂತೆ ದಾಖಲಾದ ರೋಗಿಗಳ ವೆಂಟಿಲೇಟರ್ ಮತ್ತು ಆಕ್ಸಿಜನ್ ನಿರ್ವಹಣೆ ಬಗ್ಗೆ ಬೆಡ್ ನಿರ್ವಹಣೆ ಬಗ್ಗೆ ಈ ಪೆÇೀರ್ಟಲ್ ನಲ್ಲಿ ಅಪಡೇಟ್ ಸಹ ಮಾಡಲಾಗುತ್ತಿದ್ದು ಖಾಸಗಿ ಆಸ್ಪತ್ರೆಗಳು ಸಹ ಶೇ. 90ರಷ್ಟು ಅಪ್ಡೇಟ್ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಜಿಲ್ಲೆಯ ಯಾವುದೇ ಕೋವಿಡ್ ರೋಗಿಗೆ ತೊಂದರೆಯಾಗಬಾರದು. ಈ ಫೆÇೀರ್ಟಲ್ದಲ್ಲಿ ನೊಂದಣಿ ಸಮರ್ಪಕವಾಗಿ ನಡೆಸುವಂತೆ ತಿಳಿಸಲಾಗಿದೆ ಎಂದ ಅವರು ರೋಗದಿಂದ ರಕ್ಷಿಸಿಕೊಳ್ಳಲು ತಪ್ಪದೇ ಲಸಿಕೆಗಳನ್ನು ಪ್ರತಿಯೊಬ್ಬರು ಹಾಕಿಸಿಕೊಳ್ಳಬೇಕು. ಈ ಲಸಿಕೆ ಹಾಕಿಸಿಕೊಳ್ಳುವುದರಿಂದ ಶೇಕಡ 70ರಷ್ಟು ಜೀವರಕ್ಷಣೆ ಹಾಗೂ ಎರಡನೇ ಡೋಸ್ ಹಾಕಿಕೊಳ್ಳುವುದರಿಂದ ಹೆಚ್ಚಿನ ರಕ್ಷಣೆ ಪಡೆಯಬಹುದಾಗಿದ್ದು ಎರಡು ಲಸಿಕೆ ಪಡೆಯುವುದರಿಂದ ಬೇಗ ಗುಣಮುಖರಾಗಲು ಸಾಧ್ಯವಿದೆ ಎಂದು ಹೇಳಿದರು.
ಬರುವ ಮೇ ಒಂದರಿಂದ ಹದಿನೆಂಟು ವರ್ಷದವರಿಗೂ ಕೋವಿಡ್-19 ಲಸಿಕೆ ನೀಡಲು ಆರಂಭಿಸುವ ಸಾಧ್ಯತೆ ಇದ್ದು 45 ವರ್ಷ ಮೇಲ್ಪಟ್ಟವರು ತಪ್ಪದೇ ಈ ಲಸಿಕೆಯನ್ನು ಪಡೆಯಬೇಕು. ಲಸಿಕಾ ಕಾರ್ಯಕ್ರಮದಲ್ಲಿ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಹಾಗೂ ಕೊವಿಡ್ ವಲ್ಲದ ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಡಯಾಲಿಸಸ್ ಗೆ ಸಂಬಂಧಿಸಿದಂತೆ ಬಿ ಎಲ್.ಡಿ.ಇ ಹಾಗೂ ಯಶೋಧರ ಆಸ್ಪತ್ರೆಗಳಿಗೆ ಸಮನ್ವಯತೆಯಿಂದ ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ವೈದ್ಯಕೀಯ ತಂಡಗಳು ಅತ್ಯುತ್ತಮ ರೀತಿಯ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ.
ಪ್ರತಿನಿತ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ,ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ, ಆಸ್ಪತ್ರೆಗಳಿ ಗಳಲ್ಲಿ ರೋಗಿಗಳಿಂದ ಹೆಚ್ಚಿನ ರೂಪದಲ್ಲಿ ದರ ಆಕರಿಸುವ ಗಮನಕ್ಕೆ ತಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯ ಪಡೆಗಳು ಕಾರ್ಯನಿರ್ವಹಿಸುತ್ತಿದ್ದು ಗ್ರಾಮಮಟ್ಟದಲ್ಲಿ ತಾಲೂಕ ಪಂಚಾಯತ್ ಇ ಓ, ಪಿಡಿಯೋ,ಪೆÇಲೀಸ್ ಇಲಾಖೆ ಮೂಲಕ ಜನಸಂದಣಿ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
ಅದರಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಹೋಂ ಗಾಡ್ರ್ಸ್ ಗಳನ್ನು ನೇಮಕಕ್ಕೂ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವರು ಹೇಳಿದರು
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ್, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ.ರೆಡ್ಡಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.