ಕೋವಿಡ್-19 ಜಾಗೃತಿ ಅಭಿಯಾನದ ಸಂಚಾರಿ ವಾಹನಕ್ಕೆ ಚಾಲನೆ

????????????????????????????????????

ಸಿರುಗುಪ್ಪ ಜೂ 11 : ನಗರದ ಕೃಷ್ಣ ನಗರದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಯಲಯದ ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ಜಿಲ್ಲಾ ಮತ್ತು ತಾಲೂಕು ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹೋಗದಲ್ಲಿ ಕೋವಿಡ್-19 ಜಾಗೃತಿ ಅಭಿಯಾನದ ಸಂಚಾರಿ ವಾಹನಕ್ಕೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಸತೀಶ್ ಬಿ.ಕೂಡಲಗಿ, ಪ್ರಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಿದ್ಯಾಶ್ರೀ, ನಗರಸಭೆ ಅಧ್ಯಕ್ಷ ಡಿ.ನಾಗರಾಜ, ತಾಲೂಕು ಪಂಚಾಯಿತಿ ಕಾರ್ಯಾನಿರ್ವಹಕಾಧಿಕಾರಿ ಶಿವಪ್ಪ ಸುಬೇದರ್, ತೋಟಗಾರಿಕೆ ಸಹಾಯಕ ನಿದೇರ್ಶಕ ವಿಶ್ವನಾಥ, ಕೃಷಿ ಸಹಾಯಕ ನಿದೇರ್ಶಕ ನಜೀರ್ ಅಹ್ಮದ್, ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ದೇವರಾಜ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಎ.ಜಲಾಲಪ್ಪ, ಆರೋಗ್ಯ ಇಲಾಖೆಯ ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪ್ರಹ್ಲಾದ್ ಡಿ. ಇದ್ದರು.