ಕೋವಿಡ್-19 ಲಸಿಕೆ ಪಡೆದ ನ್ಯಾಯಾಧೀಶರು

ಚಿತ್ರದುರ್ಗ,ಏ.೧೮; ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಕೀಲರು, ನ್ಯಾಯಾಧೀಶರು ಮತ್ತು ಸಿಬ್ಬಂದಿ ವರ್ಗದವರಿಗೆ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಲಸಿಕಾ ಸತ್ರ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಪ್ರೇಮಾವತಿ ಮನಗೂಳಿ ಅವರು ಕೋವಿಡ್-19 ಲಸಿಕೆ ಪಡೆದರು.
ಕೋವಿಡ್ ಲಸಿಕೆ ಪಡೆದು ನಂತರ ಮಾತನಾಡಿದ ಅವರು, ಕೋವಿಡ್-19 ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳುವುದಕ್ಕೆ ಕೋವಿಡ್-19 ಲಸಿಕೆ ತುಂಬಾ ಅವಶ್ಯಕವಾಗಿದೆ. ಲಸಿಕೆ ತುಂಬಾ ಸುರಕ್ಷಿತವಾಗಿದ್ದು, ಎಲ್ಲಾ ಸಾರ್ವಜನಿಕರು ಯಾವುದೇ ಭಯ, ಭೀತಿ, ಆತಂಕ ಪಡದೇ ಕೋವಿಡ್ ಲಸಿಕೆ ಪಡೆಯಬೇಕು ಎಂದರು.
ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದು ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು.
ಕಾರ್ಯಕ್ರಮದಲ್ಲಿ 166 ಜನರಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ಗಿರೀಶ್,  ಆರ್‍ಸಿಹೆಚ್ ಅಧಿಕಾರಿ ಡಾ. ಕುಮಾರಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್, ಜಿಲ್ಲಾ ನ್ಯಾಯಾಲಯ ವ್ಯವಸ್ಥಾಪಕ ಧೋನಿ,  ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಜಾನಕಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.