ಕೋವಿಡ್-19 ಲಸಿಕೆ ಪಡೆದ ಶಾಸಕ ಯತ್ನಾಳ

ವಿಜಯಪುರ: ಎ.3: ನಗರ ಶಾಸಕರಾದ ಬಸನಗೌಡ ರಾ ಪಾಟೀಲ (ಯತ್ನಾಳ) ಅವರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿಂದು ಕೋವಿಡ್-19 ಲಸಿಕೆಯನ್ನು ಪಡೆದುಕೊಂಡರು.
ಭಾರತದಲ್ಲೇ ಅಭಿವೃದ್ಧಿ ಪಡಿಸಿದ ಅತ್ಯಂತ ಸುರಕ್ಷಿತ ಹಾಗೂ ಕೊರೋನಾವನ್ನು ಮಣಿಸಲು ಅಗತ್ಯವಿರುವ ಈ ಲಸಿಕೆಯನ್ನು ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಪಡೆದುಕೊಳ್ಳಲು ಸಲಹೆ ನೀಡಿದರು.
ಕೋವಿಡ್-19 ಲಸಿಕೆ ಕುರಿತು ಜಾಗೃತಿ ಮೂಡಿಸಿ, ಸ್ವಯಂಪ್ರೇರಿತವಾಗಿ ಲಸಿಕೆ ಪಡೆದು ಭಾರತವನ್ನು ಕೊರೊನಾ ಮುಕ್ತವಾಗಿಸಲು ಸಹಕರಿಸಿ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ|| ರಾಜಕುಮಾರ ಯರಗಲ್, ಡಾ|| ಶರಣಪ್ಪ ಕಟ್ಟಿ, ಡಾ|| ಎಸ್.ಎಲ್.ಲಕ್ಕಣ್ಣವರ್, ಡಾ|| ಕವಿತಾ ದೊಡ್ಡಮನಿ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಶ್ರೀಹರಿ ಗೊಳಸಂಗಿ ಹಾಗೂ ಇತರರು ಉಪಸ್ಥಿತರಿದ್ದರು.