ಕೋವಿಡ್ 19 ಸಾಂಕ್ರಾಮಿಕ ಪ್ರಕರಣ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಸೂಚನೆ

ವಿಜಯಪುರ, ಏ.17-ನಮ್ಮ ಜಿಲ್ಲೆಯಲ್ಲಿ ಕೋವಿಡ್ 19 ಸಂಕ್ರಾಮಿಕ ಪ್ರಕರಣಗಳು ಹೆಚ್ಚಾಗುತ್ತಿದ್ದು ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪೆರೆನ್ಸ್ ಹಾಲ್‍ನಲ್ಲಿ ನಡೆದ ಕೋವಿಡ್-19 ವೈರಾಣು ನಿಯಂತ್ರಣಕ್ಕಾಗಿ ವಿವಿಧ ಇಲಾಖೆಗಳ ಮೂಲಕ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಚರ್ಚಿಸಲು ಕಂದಾಯ ಸಚಿವ ಆರ್ ಅಶೋಕ್, ಗೃಹಸಚಿವ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ನೇತೃತ್ವದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿ ವಿಜಯಪುರ ಮಹಾರಾಷ್ಟ್ರದ ಗಡಿ ಪ್ರದೇಶ ಜಿಲ್ಲೆಯಾದ್ದರಿಂದ ಗಡಿ ಹಂಚಿಕೊಂಡಿರುವ ಹಳ್ಳಿ ಮತ್ತು ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ವ್ಯಾಕ್ಸಿನ್ ಮತ್ತು ವೈದ್ಯಕೀಯ ದರ್ಜೆಯ ಆಮ್ಲಜನಕವು ಅಗತ್ಯ ಪ್ರಮಾಣದಲ್ಲಿ ಲಭ್ಯವಿದೆ .ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಎಲ್ಲಾ ರೀತಿಯಿಂದಲೂ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಪೆÇಲೀಸ್ ವರಿμÁ್ಠಧಿಕಾರಿ ಅನುಪಮ್ ಅಗರವಾಲ್, ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ಡಿ.ಎಚ್.ಒ ರಾಜಕುಮಾರ್ ಎರಗಲ್, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.