ಕೋವಿಡ್-19: ಸುರಕ್ಷತಾ ಕ್ರಮ ಅನುಸರಿಸಲು ಜನತೆಗೆ ಮನವಿ

ಕಲಬುರಗಿ, ಅ,30 : ಕೋವಿಡ್ -19 ಸೋಂಕು ಹಿನ್ನೆಲೆಯಲ್ಲಿ
ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ್ ಎಸ್.ಮಾಲಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಚುನಾವಣೆಯ ಮತ ಎಣಿಕೆ ಕೇಂದ್ರ ಬಳಿ ಸೇರುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಹಾಗೆಯೇ ಮುಂಬರುವ ದೀಪಾವಳಿ ಹಬ್ಬ ಮುಂತಾದ ಸಂದರ್ಭದಲ್ಲಿಯೂ ಸುರಕ್ಷತೆ ಕಾಪಾಡಿಕೊಳ್ಳುವಂತೆ ಅವರು ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಒಂದು ನೂರಕ್ಕಿಂತ ಕಡಿಮೆ ಬರುತ್ತಿವೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹೋಗಲಾಡಿಸಲು ಸಾರ್ವಜನಿಕರ ಸಹಕಾರ ಬಹು ಮುಖ್ಯವಾಗಿರುತ್ತದೆ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಆಗಾಗ ಸಾಬೂನಿನಿಂದ ಕೈತೊಳೆದುಕೊಳ್ಳಬೇಕು ಎಂದು ಅವರು ಜನತೆಗೆ ಸಲಹೆ ನೀಡಿದ್ದಾರೆ.