ಕೋವಿಡ್ 2ನೇ ಅಪಾಯಕಾರಿ ಅಲೆ ನಿಯಂತ್ರಿಸಲು ಸರ್ಕಾರದ ಮಾರ್ಗಸೂಚಿ ಪಾಲಿಸಿ: ಜಿಲ್ಲಾಧಿಕಾರಿ ಸುನೀಲಕುಮಾರ

ವಿಜಯಪುರ, ಮಾ.14-ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪುಗುಂಪಾಗಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ಜಿಲ್ಲೆಯಲ್ಲೂ ಕೋವಿಡ್ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಈ ಕೆಳಗಿನ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸೂಚಿಸಿದ್ದಾರೆ.
ಅಂತರ ರಾಜ್ಯ ಪ್ರಮಾಣ, ಟೆಸ್ಟ್ ಪಾಸಿಟಿವಿಟಿ ಪ್ರಮಾಣ ಹಾಗೂ ಸೋಂಕು ಹರಡುವ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯಲ್ಲಿ ದೈನಂದಿನ ಪರೀಕ್ಷಾ ಪ್ರಮಾಣವನ್ನು 3000 ಪರೀಕ್ಷೆಗಳು ಈಗಾಗಲೇ ನೀಡಿರುವ ಗುರಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ದೈನಂದಿನ ಪರೀಕ್ಷಾ ಗುರಿಯನ್ನು ತಲುಪಲು ಪೂರ್ಣಪ್ರಮಾಣದಲ್ಲಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಆರ್‍ಟಿಪಿಸಿಆರ್ ಪರೀಕ್ಷೆಗಳನ್ನು ಗಣನೀಯವಾಗಿ ಹೆಚ್ಚಿಸಬೇಕು ಹಾಗೂ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳನ್ನು ಕಡಿಮೆಗೊಳಿಸಬೇಕು. ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸಲು ಹಾಗೂ ಸಂಪರ್ಕಿತರನ್ನು ಪತ್ತೆ ಹಚ್ಚುವ ಪ್ರಕ್ರಿಯೆಯು 1:20 ಪ್ರಮಾಣದಲ್ಲಿ ಇರಬೇಕೆಂದು ಸೂಚಿಸಲಾಗಿದೆ
ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳಾದ ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದ್ದು, ಇದನ್ನು ಜಾರಿಗೊಳಿಸಲು ಸೂಚಿಸಲಾಗಿದೆ.
ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡುವುದು ಇತ್ಯಾದಿಗಳ ಕುರಿತು ವ್ಯಾಪಕವಾಗಿ ಆರೋಗ್ಯ ಶಿಕ್ಷಣವನ್ನು ವಿವಿಧ ಮಾಧ್ಯಮಗಳ ಮೂಲಕ (ಮುದ್ರಣ ವಿದ್ಯುನ್ಮಾನ ಸೋಶಿಯಲ್ ಮೀಡಿಯಾ ಇತ್ಯಾದಿಗಳ ಮೂಲಕ) ಕ್ರಮಕೈಗೊಳ್ಳುವುದು. ಈ ಚಟುವಟಿಕೆಯನ್ನು ಪರಿಣಾಮಕಾರಿಯಾಗಿಸಲು ಸೂಚಿಸಲಾಗಿದೆ.
ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲನೆ, ಕೋವಿಡ್ ಪರೀಕ್ಷೆಗೆ ಒಳಪಡುವುದು ಹಾಗೂ ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಹ ಅಗತ್ಯ ಸಂದೇಶಗಳನ್ನು ಸಾರ್ವಜನಿಕರಿಗೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ದಿನನಿತ್ಯ ಎಲ್ಲ ಪ್ರಾಥಮಿಕ, ನಗರ ಆರೋಗ್ಯ ಕೇಂದ್ರಗಳಲ್ಲಿ 20, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 50 ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 100 ಗಂಟಲು ಮಾದರಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ
ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ನಿಗದಿತ ಗುರಿಯನ್ನು ಸಾಧಿಸಲು ಸೂಚಿಸಲಾಗಿದೆ. ವಿವಿಧ ಸಮಾರಂಭಗಳು ಹಾಗೂ ಆಚರಣೆಗಳ ಸಂದರ್ಭದಲ್ಲಿ ಹೆಚ್ಚು ಸಾರ್ವಜನಿಕರು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯ ಹೆಚ್ಚಿರುತ್ತದೆ. ಆದ್ದರಿಂದ ಈ ವಿವಿಧ ಸಂದರ್ಭಗಳಲ್ಲಿ ಈ ಕೆಳಗೆ ಸೂಚಿಸಿದ ಸಂಖ್ಯೆಯನ್ನು ಮೀರದಂತೆ ಮಾತ್ರವೇ ಸಾರ್ವಜನಿಕರಿಗೆ ಅವಕಾಶ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಆಚರಣೆಗಳು, ಸಮಾರಂಭಗಳು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆ ಭಾರತ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿಯೊಬ್ಬನಿಗೆ 3.5 ಸ್ಕ್ವೇರ್ ಮೀಟರ್ ಮಾನದಂಡವನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ .
ಮದುವೆಯ ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆ 500 ಮೀರದಂತೆ ತೆರೆದ ಪ್ರದೇಶಗಳು, 200 ಮೀರದಂತೆ ಸಭಾಂಗಣಗಳು, ಹಾಲ್‍ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳು.
ಜನ್ಮದಿನ ಹಾಗೂ ಇತರೆ ಆಚರಣೆಗಳು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆ 100 ಮೀರದಂತೆ, 50 ಮೀರದಂತೆ ಸಭಾಂಗಣಗಳು ಹಾಲ್‍ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳು.
ನಿಧನ, ಶವಸಂಸ್ಕಾರ ಆಚರಣೆಗಳು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆ 100 ಮೀರದಂತೆ ತೆರೆದ ಪ್ರದೇಶಗಳು, 50 ಮೀರದಂತೆ ಸಭಾಂಗಣಗಳು, ಹಾಲ್‍ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳು. ಅಂತ್ಯಕ್ರಿಯೆ 50 ಮೀರದಂತೆ, ಇತರೆ ಸಮಾರಂಭಗಳು ನೂರು ಮೀರದಂತೆ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ ಇರಬೇಕು ಎಂದು ಅವರು ತಿಳಿಸಿದ್ದಾರೆ.
ಧಾರ್ಮಿಕ ಆಚರಣೆಗಳು, ಸಮಾರಂಭಗಳು 500 ಮೀರದಂತೆ ತೆರೆದ ಪ್ರದೇಶಗಳು, ರಾಜಕೀಯ ಆಚರಣೆಗಳು, ಸಮಾರಂಭಗಳು 500 ಮೀರದಂತೆ ತೆರೆದ ಪ್ರದೇಶಗಳು.
ಈಗಾಗಲೇ ಚಾಲ್ತಿಯಲ್ಲಿರುವಂತೆ ಕೇರಳ ಹಾಗೂ ಮಹಾರಾಷ್ಟ್ರಗಳಿಂದ ಬರುವವರಿಗೆ ಆರ್‍ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸುವುದು ಈ ನಿಯಮವನ್ನು ಕಟ್ಟುನಿಟ್ಟಾಗಿ ಧೂಳಖೇಡದಲ್ಲಿ ಪಾಲಿಸಲಾಗುತ್ತಿದೆ. ಹಾಗೂ ಜಿಲ್ಲೆಯ ಗಡಿಭಾಗಗಳಲ್ಲಿ ಆರ್‍ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯ ಪರಿಶೀಲನೆಯನ್ನು ತೀವ್ರಗೊಳಿಸಲು ಮತ್ತೊಮ್ಮೆ ಸೂಚಿಸಲಾಗಿದೆ.
ಕಳೆದ ಒಂದು ತಿಂಗಳಿಂದ ಧೂಳಖೇಡ ಚೆಕ್ ಪೆÇೀಸ್ಟ್ ನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಆರ್‍ಟಿಪಿಸಿಆರ್ ನೆಗೆಟಿವ್ ವರದಿಯನ್ನು ಚೆಕ್ ಮಾಡುತ್ತಿದ್ದಾರೆ. ಮತ್ತು ಕಳೆದ ಒಂದು ವಾರದಿಂದ ರೈಲ್ವೆ ನಿಲ್ದಾಣದಲ್ಲಿ ಆರ್‍ಟಿಪಿಸಿಆರ್ ನೆಗೆಟಿವ್ ವರದಿಯನ್ನು ಚೆಕ್ ಮಾಡುತ್ತಿದ್ದಾರೆ. ಮೊದಲಿನಿಂದಲೂ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆ ಮಾಡುತ್ತಿದ್ದೇವೆ.
ಅಂತರ ರಾಜ್ಯ ಪ್ರಯಾಣಿಕರಿಗೆ ರೈಲ್ವೆ ಮತ್ತು ಬಸ್‍ನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಆರ್‍ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಹೊಂದಿರಬೇಕೆಂದು ಸೂಚಿಸಲಾಗಿದೆ.
ಒಟ್ಟಾರೆ ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚಿಸಿದ್ದಾರೆ.
ಈ ಮೇಲಿನ ಎಲ್ಲಾ ಆದೇಶವನ್ನು ಪಾಲಿಸದಿದ್ದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.