ಕೋವಿಡ 19 ಲಸಿಕೆ ವಿತರಣೆ ಕೇಂದ್ರಕ್ಕೆ ಶಾಸಕ ಭೇಟಿ


ಧಾರವಾಡ ಜ.9- ತಾಲೂಕಿನ ಗರಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತೆರೆಯಲಾದ ಕೊವಿಡ್ 19 ಲಸಿಕೆ ವಿತರಣಾ ವಿಭಾಗಕ್ಕೆ ಶಾಸಕ ಅಮೃತ ದೇಸಾಯಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲಸಿಕೆ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಯನ್ನು ಶಾಸಕರು ಖುದ್ದಿ ಪರಿಶೀಲಿಸಿದರು. ನಂತರ ಮಾತನಾಡಿದ ಶಾಸಕಅಮೃತ ದೇಸಾಯಿಯವರು, ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೋವಿಡ್ 19 ವೈರಸ್ ಗೆ ಭಾರತದ ವಿಜ್ಞಾನಿಗಳು ಲಸಿಕೆ ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಲಸಿಕೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದೇಶದ ಪ್ರಜೆಗಳಿಗೆ ನೀಡಲು ಸಿದ್ದಾಗಿರುವುದು ಹೆಮ್ಮೆಯ ಸಂಗತಿ.
ಕೋವಿಡ್ ಬರದಂತೆ ತಡೆಯಲು ಭಾರತ ದೇಶವೇ ಲಸಿಕೆ ಕಂಡು ಹಿಡಿದಿದೆ. ಪ್ರಥಮ ಹಂತದಲ್ಲಿ ಕೇವಲ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಲಸಿಕೆ ವಿತರಣೆ ನಡೆಯಲಿದೆ. ನಂತರದ ದಿನದಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಗೆ ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.ಕೆಲವೇ ದಿನದಲ್ಲಿ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ದೊರೆಯಲಿದೆ. ಗ್ರಾಮಸ್ಥರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸರಿಯಾಗಿ ಲಸಿಕೆ ಸರಿಯಾಗಿ ವಿತರಿಸುವ ಕೆಲಸ ಮಾಡಬೇಕು ಎಂದು ಅಲ್ಲಿನ ವೈದ್ಯರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರರಾದ ಶ್ರೀ ಸಂತೋಷ ಬಿರಾದಾರ ಹಾಗೂ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು