ಕೋವಿಶೀಲ್ಡ್ ಲಸಿಕೆ ಪಡೆದ ಜೆಡಿಎಸ್ ಜಿಲ್ಲಾಧ್ಯಕ್ಷ

ಬೀದರ್:ಏ.05: ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಹಾಗೂ ನಗರಸಭೆ ಮಾಜಿ ಅಧ್ಯಕ್ಷರಾದ ಅವರ ಪತ್ನಿ ವಿಜಯಲಕ್ಷ್ಮಿ ಪಾಟೀಲ ಅವರು ಬೀದರ್ ತಾಲ್ಲೂಕಿನ ಮೀರಾಗಂಜ್ ಗ್ರಾಮದ ಸಮುದಾಯ ಭವನದ ಲಸಿಕಾ ಕೇಂದ್ರದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು.
ಲಸಿಕೆ ಅತ್ಯಂತ ಸುರಕ್ಷಿತವಾಗಿದೆ. ಕಾರಣ, ಅರ್ಹ ಎಲ್ಲರೂ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆಯಬೇಕು. ಕೋವಿಡ್ ಮುಕ್ತಿಗೆ ಕೈಜೋಡಿಸಬೇಕು ಎಂದು ರಮೇಶ ಪಾಟೀಲ ಮನವಿ ಮಾಡಿದರು.