ಕೋವಿ ಶೀಲ್ಡ್ ಲಸಿಕೆ ತುರ್ತು ಬಳಕೆಗೆ ಕೇಂದ್ರದ ಅನುಮತಿ

ನವದೆಹಲಿ, ಜ ,2- ಆಕ್ಸ್ ಪರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟಾಜೆನಿಕಾ ಸಂಸ್ಥೆಗಳು ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ತುರ್ತು ಬಳಕೆಗೆ ಕೇಂದ್ರಸರ್ಕಾರ ಅನುಮೋದನೆ ನೀಡಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ದೆಹಲಿಯಲ್ಲಿಂದು‌ ವಿಷಯ ತಿಳಿಸಿದ್ದಾರೆ.
ತುರ್ತು ಸಂದರ್ಭದಲ್ಲಿ ಲಸಿಕೆ ಬಳಕೆಗೆ ತಜ್ಞರ ಸಮಿತಿ ಒಪ್ಪಿಗೆ ನೀಡಿದ್ದು ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪುಣೆಯ ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ ಕೋವಿ ಶೀಲ್ಡ್ ಲಸಿಕೆ ತಯಾರಿಸುತ್ತಿದೆ. ದೇಶದಲ್ಲಿ ಅನುಮತಿ ಪಡೆದ ಮೊದಲ ಲಸಿಕೆ ಇದಾಗಿದೆ ಎಂದು ಅವರು ಹೇಳಿದರು.