ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ಪಡೆಯಲು ಸೂಚನೆ

ಕಲಬುರಗಿ,ಮೇ.26:ಕಲಬುರಗಿ ನಗರದ ಜಿಮ್ಸ್ ವೈದ್ಯಕೀಯ ಮಹಾವಿದ್ಯಾಲಯ, ಇ.ಎಸ್.ಐ.ಸಿ. ವೈದ್ಯಕೀಯ ಮಹಾವಿದ್ಯಾಲಯ, ಕಲಬುರಗಿಯ ಆಳಂದ ಚೆಕ್ ಪೋಸ್ಟ್ ಹತ್ತಿರದ ಸರ್ಕಾರಿ ಯುನಾನಿ ಆಸ್ಪತ್ರೆ ಹಾಗೂ ಆಳಂದ, ಅಫಜಲಪುರ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ ಹಾಗೂ ಸೇಡಂದಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ನೀಡಲಾಗುತ್ತಿದೆ. ಕೋವ್ಯಾಸ್ಸಿನ್ ಮೊದಲನೇ ಡೋಸ್ ಲಸಿಕೆ ಪಡೆದ ಅರ್ಹ ಫಲಾನುಭವಿಗಳು ಎರಡನೇ ಡೋಸ್ ಲಸಿಕೆಯನ್ನು ಪಡೆಯಬೇಕೆಂದು ಕಲಬುರಗಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.