ಕೋವ್ಯಾಕ್ಸಿನ್ 2ನೇ ಡೋಸ್ ಪಡೆಯಲು: ಹೆಚ್ಚುವರಿಯಾಗಿ ಒಂದು ಕೋವ್ಯಾಕ್ಸಿನ್ ಲಸಿಕಾ ಕೇಂದ್ರ ಸ್ಥಾಪನೆ

ವಿಜಯಪುರ, ಮೇ.18-ಸಾರ್ವಜನಿಕರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಪಡೆಯಲು ಗೊಂದಲವಾಗುತ್ತಿರುವ ಕಾರಣ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದಲ್ಲಿ ಹೆಚ್ಚುವರಿಯಾಗಿ ಒಂದು ಕೋವ್ಯಾಕ್ಸಿನ್ ಲಸಿಕಾ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಈಗಾಗಲೇ 6 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಲಸಿಕೆ ಅಭಿಯಾನದಡಿಯಲ್ಲಿ ವಿವಿಧ ಹಂತಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆಯನ್ನು ನೀಡಲಾಗುತ್ತಿದ್ದು. ಎಲ್ಲಾ 6 ನಗರ ಪ್ರಾಥಮಿಕ ಕೇಂದ್ರಗಳಲ್ಲಿ ಲಸಿಕೆಯ ಲಭ್ಯತೆಯ ಅನುಸಾರ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತಿರುವುದು ರಿಂದ ಸಾರ್ವಜನಿಕರಿಗೆ ವ್ಯಾಕ್ಸಿನ್ 2ನೇ ಡೋಸ್ ಪಡೆಯಲು ಗೊಂದಲ ವಾಗುತ್ತಿರುವುದುನ್ನು ಮನಗಂಡು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ಪಡೆಯಲು ಅರ್ಹವಿರುವ ಫಲಾನುಭವಿಗಳಿಗೆ ಮಾತ್ರ ಅನುಕೂಲವಾಗಲು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದಲ್ಲಿ ಹೆಚ್ಚುವರಿಯಾಗಿ ಒಂದು ಕೋವ್ಯಾಕ್ಸಿನ್ ಲಸಿಕಾ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸದರಿ ಲಸಿಕಾ ಕೇಂದ್ರದಲ್ಲಿ 2ನೇ ಡೋಸ್ ಲಸಿಕೆಯನ್ನು ಪಡೆಯಲು ಅರ್ಹವಿರುವ ಫಲಾನುಭವಿಗಳಿಗೆ ಮಾತ್ರ ನೀಡಲಾಗುತ್ತದೆ. ಕಾರಣ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ಪಡೆಯಲು ಅರ್ಹ ಫಲಾನುಭವಿಗಳು ಹೊಸದಾಗಿ ಸ್ಥಾಪಿಸಲಾದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದಲ್ಲಿನ ಕೋವ್ಯಾಕ್ಸಿನ್ ಲಸಿಕಾ ಕೇಂದ್ರಕ್ಕೆ ತೆರಳಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.
ಅದರಂತೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ಪಡೆಯಲು ನಗರ ಆರೋಗ್ಯ ಕೇಂದ್ರಗಳಿಗೆ ಹೋಗುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಪಿ.ಸುನೀಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.