ಕೌಶಲದಿಂದ ಉದ್ಯಮಕ್ಕೆ ಯಶಸ್ಸು: ಗರಿಮಾ ಪನ್ವಾರ್

ಬೀದರ:ಮಾ.22: ಕೌಶಲ, ಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ ಉದ್ಯಮದಲ್ಲಿ ಯಶಸ್ಸು ಗಳಿಸಬಹುದು ಎಂದು ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್ ಅಭಿಪ್ರಾಯಪಟ್ಟರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ವತಿಯಿಂದ ನೌಬಾದ್‍ನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಿರುವ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೈಗಾರಿಕೆಗಳಲ್ಲಿ ಯಶಸ್ಸು ಹಾಗೂ ವೈಫಲ್ಯ ಸಾಮಾನ್ಯ. ವೈಫಲ್ಯ ಕಂಡವರು ಕಾರಣ ಅರಿತು ಮತ್ತೆ ಉದ್ಯಮದಲ್ಲಿ ಯಶಸ್ಸಿನ ದಾರಿಯಲ್ಲಿ ಸಾಗಬೇಕು ಎಂದು ಹೇಳಿದರು.

ಉದ್ಯಮಕ್ಕೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೋಳಿ ಮಾತನಾಡಿದರು.
ಬೆಂಗಳೂರಿನ ಟೆಕ್ಸಾಸ್ ಮುಖ್ಯ ಸಲಹೆಗಾರ ಗುರುರಾಜ ಸ್ವಾಗತಿಸಿದರು.