ರಾಯಚೂರು,ಜು.೨೧-
ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಇಂಡಿವಿಲೇಜ್ ಪೌಂಡೇಶನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರು ಇವರ ಸಹಭಾಗಿತ್ವದಲ್ಲಿ ಮೃಧು ಕೌಶಲ್ಯ ಅಭಿವೃದ್ಧಿ ಮತ್ತು ವಿಪತ್ತು ನಿರ್ವಹಣಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಂದ್ರ ಬಾಬು ಅವರು
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಯುವ ಪೀಳಿಗೆಯು ತಮ್ಮ ಪ್ರತಿಭೆಯ ಮೂಲಕ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು.
ಮಕ್ಕಳ ವಿದ್ಯಾ ಭ್ಯಾಸಕ್ಕಾಗಿ ಪೋಷಕರು ಮನೆ ಸೇರಿದಂತೆ ಅಸ್ತಿ ಪಾಸ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಮಕ್ಕಳೆ ಪೋಷಣೆಯಲ್ಲಿ ತಂದೆ ತಾಯಿಗಳ ಪಾತ್ರ ದೊಡ್ಡದು, ಯುವ ಪಿಳಿಗೆಯು ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಪದವಿ ಜೊತೆಗೆ ಕೌಶಲ್ಯ ಬಹಳ ಮುಖ್ಯ ಈ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ತಮ್ಮಲ್ಲಿ ಅಡಗಿರುವ ಕೌಶಲ್ಯವನ್ನು ಬೆಳಕಿಗೆ ಇತರರಿಗೂ ಉದ್ಯೋಗವನ್ನು ನೀಡುವಷ್ಟರ ಮಟ್ಟಿಗೆ ಜೀವನವನ್ನು ರೂಪಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯರು ಡಾ. ಯಂಕಣ್ಣ , ಡಾ.ಜೆ. ಈರಣ್ಣ, ಡಾ ಮಹಾಂತೇಶ ಅಂಗಡಿ, ಡಾ.ಎ ರವಿ, ಮೆಹಬೂಬ್ ಜಿಲಾನ್ ಖುರೇಸಿ, ವಿದ್ಯಾಸಾಗರ ಚಿನಮಗೇರಿ,ದಾನಿಶ್ ಸೇರಿದಂತೆ ವಿದ್ಯಾರ್ಥಿಗಳು ಅನೇಕರಿದ್ದರು.