ಕೌಸಲ್ಯ ಸುಪ್ರಜಾ ರಾಮ ಟ್ರೈಲರ್ ಬಿಡುಗಡೆ ಕಿಚ್ಚ ಸಾಥ್

“ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೈಲರ್ ಅನ್ನು ನಟ ಕಿಚ್ಚ ಸುದೀಪ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಶಶಾಂಕ್ ನಿರ್ದೇಶನದ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಬೃಂದಾ ಆಚಾರ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಪಡೆದರೆ ಮತ್ತೊಂದು ಪ್ರೀ ಎನ್ನುವಂತೆ  ಡಾರ್ಲಿಂಗ್ ಕೃಷ್ಟ ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಪತ್ನಿ ಮಿಲನಾಗೂ ಚಿತ್ರದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ ನಿರ್ದೇಶಕರು. ಈ ರೀತಿಯ ಕಥೆ ಸಿಗೋದು ಕಷ್ಟ. ದೊಡ್ಡ ಮಟ್ಟದಲ್ಲಿ ಸದ್ದು ಮಾಡಬಹುದು ಎಂಬ ನಿರೀಕ್ಷೆ ಇದೆ ಎಂದು ತನ್ನ ಬೆನ್ನು ತಟ್ಟಿಕೊಂಡರು ನಿರ್ದೇಶಕರು ಶಶಾಂಕ್.

ಚಿತ್ರದಲ್ಲಿ ಕೃಷ್ಣ ಅವರನ್ನು ಬೇರೆ ರೀತಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಮಿಲನಾ ಚಿತ್ರಕ್ಕೆ ಆಯ್ಕೆ ಮಾಡಲು ಕಾರಣ ಬೇರೆಯೇ ಇದೆ. ನೈಜವಾಗಿ ಮತ್ತು ಸೆನ್ಸಿಬಲ್ ಆಗಿ ನಟಿಸಬೇಕಿತ್ತು. ನಿರೀಕ್ಷೆಗೂ ಮೀರಿ ನಟಿಸಿದ್ದಾರೆ. ಬೃಂದಾ ಅಚಾರ್ಯ ನಟನೆ ಕೂಡ ಅದ್ಭುತವಾಗಿದೆ ಎಂದು ಹೇಳಿದರು.

ಚಿತ್ರ ನೋಡುವ ಪ್ರತಿಯೊಬ್ಬರಿಗೂ ಪ್ರತಿಯೊಂದು ಪಾತ್ರ ಒಂದಲ್ಲ ಒಂದು ರೀತಿ ತಮಗೆ ತಾವೇ ಹೊಂದಾಣಿಕೆ ಮಾಡಿಕೊಳ್ಳಬಹುದು ಇದೇ ತಿಂಗಳ 28ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಾಯಕ ಡಾರ್ಲಿಂಗ್ ಕೃಷ್ಣ ಮಾತನಾಡಿ ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಮನರಂಜನಾತ್ಮಕವಾಗಿ ಹೇಳಲಾಗಿದೆ.ಬಹಳ ಸುಲಭವಾಗಿ ಮುಗಿದ ಚಿತ್ರ ಇದು. ನಟನೆ ಮಾಡಿದ್ದೇ ಗೊತ್ತಾಗಲಿಲ್ಲ. ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದು ಹೇಳಿಕೊಂಡರು.

ನಿರ್ಮಾಪಕ ಬಿಸಿ ಪಾಟೀಲ್ ಮಾಹಿತಿ ನೀಡಿ ಕೌರವ ಪೆÇ್ರಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಚಿತ್ರ ನಿರ್ಮಾಣ ಮಾಡಿದ್ದೇವೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಯಶಸ್ವಿಯಾಗಿವೆ ಎಂದರು. ಚಿತ್ರದಲ್ಲಿ ನಟಿಸಿರುವ ಮಿಲನ ನಾಗರಾಜ್, ಬೃಂದಾ ಆಚಾರ್ಯ, ನಾಗಭೂಷಣ್ ಸೇರಿದಂತೆ ಅನೇಕರು ತಮ್ಮ ಪಾತ್ರಗಳ ಕುರಿತು ವಿವರ ನೀಡಿದರು.