ಕ್ಯಾನ್ಸರ್ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕರೆ


ಸಂಜೆವಾಣಿ ವಾರ್ತೆ
ಹೊಸಪೇಟೆ ಜ8: ಕ್ಯಾನ್ಸರ್ ಕಾಯಿಲೆ ನಿಯಂತ್ರಣಕ್ಕೆ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ತಾಲೂಕು ವೈದ್ಯಾಧಿಕಾರಿ ಬಸವರಾಜ್ ಹೇಳಿದರು.
ರೋಟರಿ ಹಾಗೂ ಇನ್ನರ್‍ವ್ಹೀಲ್ ಕ್ಲಬ್ ಸಹಯೋಗದೊಂದಿಗೆ ಶನಿವಾರ ರೋಟರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕ್ಯಾನ್ಸರ್ ತಪಾಸಣೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಕಾಲ, ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ರೋಗ ಬರದಂತೆ ಎಚ್ಚರಿಕೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹೆಚ್ಚಾಗಿ ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಈ ಮಾರಣಾಂತಿಕ ಖಾಯಿಲೆ ಕ್ಯಾನ್ಸರ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಕ್ಯಾನ್ಸರ್ ಕಾಯಿಲೆಯಲ್ಲಿ ಹಲವು ಬಗೆಗಳಿವೆ. ಮೊದಲ ಹಂತದಲ್ಲಿ ಕಾಯಿಲೆಯನ್ನು ಪತ್ತೆ ಹಚ್ಚಿದರೇ ಸೂಕ್ತ ಚಿಕಿತ್ಸೆಯಿಂದ ಗುಣ ಪಡಿಸುವ ಸಾಧ್ಯತೆಗಳು ಇವೆ ಎಂದರು. ತಜ್ಞ ವೈದ್ಯ ಡಾ.ವಿಶಾಲ್ ಕುಲಕರ್ಣಿ, ಇನ್ನರ್ ವೀಲ್ ಕ್ಲಬ್ಬಿನ ಅಧ್ಯಕ್ಷೆ ರೇಖಾ ಪ್ರಕಾಶ್, ಕಾರ್ಯದರ್ಶಿ ಅಶ್ವಿನಿ ಶ್ರೀನಿವಾಸ್, ಕಾರ್ಯಕ್ರಮದ ಸಂಚಾಲಕಿ ಉಮಾ ಲೋಕೇಶ್ ಇತರರು ಪಾಲ್ಗೊಂಡಿದ್ದರು.