ಕ್ರಾಂತಿಕಾರಿ ದೇಶಭಕ್ತರ ಬಲಿದಾನ ನೆನಪಿಗೆ ಪಂಜಿನ ಮೆರವಣಿಗೆ

ಪುತ್ತೂರು, ಮಾ.೨೫- ಕ್ರಾಂತಿಕಾರಿ ತ್ರಿವಳಿ ದೇಶಭಕ್ತರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ಸ್ಮರಣೆಯ ಅಂಗವಾಗಿ ಬಿಜೆಪಿ ಯುವ ಮೋರ್ಚಾ ನಗರ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ವತಿಯಿಂದ ಮಂಗಳವಾರ ಸಂಜೆ ಪಂಜಿನ ಮೆರವಣಿಗೆ ನಡೆಯಿತು.
ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಟ ಪಂಜಿನ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ದೀಪ ಉರಿಸಿ ಚಾಲನೆ ನೀಡಿದರು. ಬಳಿಕ ಮೆರವಣಿಗೆಯು ಮುಖ್ಯ ರಸ್ತೆ, ಕೋರ್ಟು ರಸ್ತೆಯ ಮೂಲಕ ಸಾಗಿ ಅಮರ್ ಜವಾನ್ ಜ್ಯೋತಿ ಬಳಿ ಸಮಾಪನಗೊಂಡಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಬಿಜೆಪಿ ಜಿಲ್ಲಾ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಮಾತನಾಡಿ, ಮೂರು ಮಂದಿ ದೇಶ ಭಕ್ತರು ಯುವ ಸಮಾಜದ ಪ್ರೇರಣಾ ಶಕ್ತಿಗಳು. ಆ ಮೂರು ಮಂದಿ ದೇಶ ಭಕ್ತರು ಒಂದೇ ದಿನ ಬಲಿದಾನವಾಗಿದೆ. ಅವರ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ದೇಶದ ದಿಕ್ಕನ್ನೇ ಬದಲಾಯಿಸಿದೆ. ಯುವ ಸಮಾಜಕ್ಕೆ ಮರೆಯಲಾಗದ ಕೊಡುಗೆ ನೀಡಿದ್ದಾರೆ. ಜಾತಿ ವ್ಯವಸ್ಥೆಯಿಂದ ಹೊರಬಂದು ಎಲ್ಲರನ್ನು ಒಗ್ಗೂಡಿಸಿಕೊಂಡು ಸ್ವಾತಂತ್ರ ಹೋರಾಟಕ್ಕೆ ಕರೆ ನೀಡಿದವರು. ಅವರ ಹೋರಾಟ ಸ್ವಾತಂತ್ರ ಭಾರತ ಹೋರಾಟದಲ್ಲಿ ಬಹುದೊಡ್ಡ ಮೈಲುಗಲ್ಲಾಗಿದೆ. ಅವರ ಆದರ್ಶಗಳನ್ನು ಯುವ ಶಕ್ತಿಗಳು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸದಸ್ಯ ಹರೀಶ್ ಬಿಜತ್ರೆ, ನಗರ ಸಭಾ ಉಪಾಧ್ಯಕ್ಷೆ ವಿದ್ಯಾಗೌರಿ, ಸದಸ್ಯರಾದ ಪಿ.ಜಿ ಜಗನ್ನಿವಾಸ ರಾವ್, ಮನೋಹರ್ ಕಲ್ಲಾರೆ, ದೀಕ್ಷಾ ಪೈ, ಇಂದಿರಾ ಪುರುಷೋತ್ತಮ, ಎಪಿಎಂಸಿ ಸದಸ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ ಶಾಂತಿವನ, ಬಿಜೆಪಿ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳೆಜ್ಜ, ಟೌನ್‌ಬ್ಯಾಂಕ್ ನಿರ್ದೇಶಕ ಕಿರಣ್ ರೈ ಬಲ್ನಾಡು, ಕೆದಂಬಾಡಿ ಗ್ರಾ.ಪಂ ಅಧ್ಯಕ್ಷ ರತನ್ ರೈ, ಒಳಮೊಗ್ರು ಗ್ರಾ.ಪಂ ಸದಸ್ಯ ಮಹೇಶ್ ರೈ, ರವೀಂದ್ರನಾಥ ರೈ ಬಳ್ಳಮಜಲು,ನಗರ ಮಂಡಲದ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಇಂದುಶೇಖರ್, ಶಿಶಿರ್ ಪೆರ್ವೋಡಿ ಸೇರಿದಂತೆ ಹಲವು ಮಂದಿ
ಪಾಲ್ಗೊಂಡಿದ್ದರು. ಯುವ ಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ನವೀನ್ ಪಡ್ನೂರು ಸ್ವಾಗತಿಸಿ, ನಗರ ಮಂ
ಡಲದ ಅಧ್ಯಕ್ಷ. ಸಚಿನ್ ಶೆಣೈ ವಂದಿಸಿದರು.