ಕ್ರಾಂತಿಯೋಗಿ ಅಂಬಿಗೇರ ಚೌಡಯ್ಯ ಜಯಂತಿ ಆಚರಣೆ

ಹುಣಸಗಿ :ಜ.21: ಸಮೀಪದ ಬಲಶೆಟ್ಟಿಹಾಳ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಗುರು ಸಂಗಯ್ಯ ಬಾಚಿಯಾಳ ಉತ್ತರ ಕರ್ನಾಟಕದ ಹಾವೇರಿ ಜಿಲ್ಲೆಯ ರಾಣಿ ಬೆನ್ನೂರು ತಾಲೂಕಿನ ಚೌಡಯ್ಯ ದಾನಾಪುರ ಅವರ ಜನ್ಮಸ್ಥಳವಾಗಿದ್ದು ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯಲ್ಲಿ ಸ್ಥಾನ ಪಡೆದು ಕಾಯಕವೇ ಕೈಲಾಸ ಎಂಬ ತತ್ತ್ವದಡಿ ನಡೆದು ಬಂದ ವ್ಯಕ್ತಿ. ಆಚಾರ-ವಿಚಾರಗಳಲ್ಲಿ ದ್ವಂದ್ವ ಬದುಕನ್ನು ಸಾಗಿಸುವವರ ವಿರುದ್ಧ ಧ್ವನಿ ಎತ್ತಿದ ಮಹಾನ್ ಚೇತನ. ಅಂಬಿಗರ ಚೌಡಯ್ಯ ಭಾವಸಾಗರವನ್ನು ದಾಟಿಸುವ ಅಂಬಿಗ ಎಂಬ ಹೆಗ್ಗಳಿಕೆ ಪಡೆದ ಮಹಾನ್ ವ್ಯಕ್ತಿ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಬದುಕು ಹಸನಾಗಿಸಿಕೊಳ್ಳಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಬಿನಾ, ಸುವರ್ಣ, ಜಗದೇವಿ, ಕಾಮಾಕ್ಷಿ, ಶಕುಂತಲಾ, ಬಶೀರಾಬೇಗಂ, ಅನ್ನಪೂರ್ಣ, ಜ್ಯೋತಿ, ಅಕ್ಕಮ್ಮ ಸೇರಿದಂತೆ ಮುದ್ದು ವಿದ್ಯರ್ಥಿಗಳು ಇದ್ದರು.