
ಅಹಮದಾಬಾದ್, ಮಾ.೯-ಭಾರತ- ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಹಾಗು ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸಾಕ್ಷಿಯಾಗಿದ್ದಾರೆ.
ಪಂದ್ಯ ಆರಂಭಕ್ಕೂ ಮುನ್ನ ಕ್ರೀಡಾಂಗಣದಲ್ಲಿ ಭಾರತ ತಂಡದ ಆಟಗಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಗೀತೆ ಹಾಡುತ್ತಿದ್ದಂತೆ ಇಡೀ ಕ್ರೀಡಾಂಗಣದಲ್ಲಿ ವಿದ್ಯುತ್ ಸಂಚಲನವಾಯಿತು.
ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು
ಈ ವೇಳೆ ಅವರು ಮೌಲ್ಯಗಳು ಮತ್ತು ತತ್ವಶಾಸ್ತ್ರವನ್ನು ಜಗತ್ತನ್ನು ಪ್ರೇರೇಪಿಸುತ್ತದೆ.ಅವರ ಜೀವನದಿಂದ ಬಹಳಷ್ಟು ಕಲಿಯಬಹುದು ಎಂದು ಹೇಳಿದ್ದಾರೆ.
ನಾಲ್ಕುದಿನಗಳ ಭೇಟಿ
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಅಹಮದಾಬಾದ್ ವಿಮಾನನಿಲ್ದಾಣದಲ್ಲಿ ಅಲ್ಬನೀಸ್ ಅವರನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸ್ವಾಗತಿಸಿದರು.
ಅದ್ದೂರಿ ಸ್ವಾಗತ:
“ಭಾರತದ ಅಹಮದಾಬಾದ್‌ಗೆ ನಂಬಲಾಗದ ಸ್ವಾಗತ ಸಿಕ್ಕಿದೆ ಆಸ್ಟ್ರೇಲಿಯಾ-ಭಾರತ ಸಂಬಂಧಗಳಿಗೆ ಮಹತ್ವದ ಪ್ರವಾಸದ ಆರಂಭವಾಗಿದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಆಸ್ಟ್ರೇಲಿಯಾ ಮತ್ತು ಭಾರತ ಶ್ರೀಮಂತ ಸ್ನೇಹವನ್ನು ಹೊಂದಿದೆ, ಸಾಮಾನ್ಯ ಆಸಕ್ತಿಗಳು, ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳು, ನಮ್ಮ ಜನರ ನಡುವಿನ ಬಾಂಧವ್ಯಗಳು ಮತ್ತು ಪ್ರೀತಿಯ ಆದರೆ ತೀವ್ರ ಕ್ರೀಡಾ ಪೈಪೋಟಿಯಿಂದ ಕೂಡಿವೆ ಎಂದಿದ್ದಾರೆ.
ಮಾತುಕತೆಗೆ ಉತ್ಸಕ: ಪ್ರಧಾನಿ
ಆಸ್ಟ್ರೇಲಿಯಾದ ಪ್ರಧಾನಿ ಅವರೊಂದಿಗಿನ ಮಾತುಕತೆಯನ್ನು ಭಾರತ ಕುತೂಹಲದಿಂದ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ-ಆಸ್ಟ್ರೇಲಿಯಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಉತ್ಪಾದಕ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ. “ಭಾರತ-ಆಸ್ಟ್ರೇಲಿಯಾ ಸ್ನೇಹವನ್ನು ಮತ್ತಷ್ಟು ಹೆಚ್ಚಿಸಲು ಉತ್ಪಾದಕ ಚರ್ಚೆಗಳನ್ನು ಎದುರು ನೋಡುತ್ತಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಅಲ್ಬನೀಸ್ ಪ್ರವಾಸ ಎರಡು ದೇಶಗಳ ನಡುವಿನ ಸಂಪರ್ಕವ ಗಾಢಗೊಳಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ ಮತ್ತು ಪ್ರದೇಶದಲ್ಲಿ ಸ್ಥಿರತೆ ಮತ್ತು ಬೆಳವಣಿಗೆಗೆ ಶಕ್ತಿಯಾಗಿದೆ ಎಂದು ಹೇಳಿದ್ದಾರೆ.