ಕ್ರಿಡೆಯಲ್ಲಿ ಆಸಕ್ತಿ ಬೆಳಸಿಕೊಳ್ಳಲು ಸಲಹೆ

ಕೋಲಾರ,ಮಾ.೨೬:ಯುವ ಜನರು ದುಷ್ಚಟಗಳಿಂದ ದೂರವಾಗಿ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಭವ್ಯ ಭಾರತದ ನವ ನಿರ್ಮಾತೃಗಳಾದ
ಯುವಕರು ದೇಶದ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಕೊಡುಗೆ ನೀಡಬೇಕೆಂದು, ಗಮನ ಮಹಿಳಾ ಸಮೂಹ ಸಂಸ್ಥೆಯ ಸಮನ್ವಯಾಧಿಕಾರಿ ಶಾಂತಮ್ಮ ಅಭಿಪ್ರಾಯಪಟ್ಟರು.
ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ, ಕೋಲಾರ ಜಿಲ್ಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೋಲಾರ ಈನೆಲ ಈಜಲ ಕಲೆ ಮತ್ತು ಸಾಂಸ್ಕೃತಕ ಸಂಸ್ಥೆ ಇವರ ಸಹಯೋಗದಲ್ಲಿ ಕೋಲಾರ ಜಿಲ್ಲಾ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ, ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಿಂದ ಮಾನಸಿಕ ವಿಕಸನಗೊಳ್ಳುತ್ತದೆ. ಹಾಗೂ ಆರೋಗ್ಯದ ದೃಷ್ಠಿಯಿಂದ ಕ್ರೀಡೆಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ಇತರ ನಿಮ್ಮ ಸ್ನೇಹಿತರಿಗೂ ಕ್ರೀಡಾ ಮನೋಭಾವ ಮೂಡಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.