ಕ್ರಿಯಾ ಯೋಜನೆ ಸಲ್ಲಿಸುವಂತೆ ಮಂಡಳಿ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಸೂಚನೆ

ಕಲಬುರಗಿ,ಜೂ.9:ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಸಕ್ತ 2021-22 ನೇ ಸಾಲಿಗೆ 1500 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರದ ಶಾಸಕರನ್ನು ಸಂಪರ್ಕಿಸಿ ಕೂಡಲೇ ಮೈಕ್ರೋ ಹಾಗೂ ಮ್ಯಾಕ್ರೋ ಯೋಜನೆಯ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಮಂಡಳಿಗೆ ಸಲ್ಲಿಸುವಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ಅವರು ಮಂಡಳಿ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶ ಎಲ್ಲಾ ಜಿಲ್ಲಾಧಿಕಾರಿಗಳು ಕೋವಿಡ್-19 ನಿರ್ವವಣೆಗಾಗಿ ಮುಂಜಾಗ್ರತವಾಗಿ ಜಿಲ್ಲೆಗಳಿಗೆ ಬೇಕಾಗಿರುವ ಅಗತ್ಯ ಹಾಗೂ ಪೂರಕ ವೈದ್ಯಕೀಯ ಉಪಕರಣಗಳನ್ನು ಪಡೆಯುವಂತೆ ಹಾಗೂ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಗಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.