`ಕ್ರೀಂ’ಗೆ  ‘ಅಗ್ನಿ’ ಬಲ ಕುತೂಹಲ ಹೆಚ್ಷಳ

“ಕಿರಿಕ್ ಪಾರ್ಟಿ” ಚಿತ್ರದ ಮೂಲಎಲ್ಲರ ಮನ ಗೆದ್ದಿರುವ ನಟಿ ಸಂಯುಕ್ತ ಹೆಗಡೆ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಕ್ರೀಂ” ಚಿತ್ರ  ವಿಷುಯಲ್ ಟ್ರೇಲರ್  ಗಮನ ಸೆಳೆದಿದೆ

ಪತ್ರಕರ್ತ ಕಮ್ ಕಥೆಗಾರ  ಅಗ್ನಿ ಶ್ರೀಧರ್  ವಿಷುಯಲ್ ಟ್ರೇಲರ್ ಬಿಡುಗಡೆ ಮಾಡಿ ಬೆಂಬಲವಾಗಿ ನಿಂತದ್ದಾರೆ. ಡಿ.ಕೆ.ದೇವೇಂದ್ರ ನಿರ್ಮಾಣ ಮತ್ತುಬ ಅಭಿಷೇಕ್ ಬಸಂತ್ ನಿರ್ದೇಶನದ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಅಗ್ನಿ ಶ್ರೀಧರ್ ಬರೆದಿದ್ದಾರೆ

ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ಅಗ್ನಿ ಶ್ರೀಧರ್ ,ಎಲ್ಲಾ ಊರುಗಳಲ್ಲಿ, ಎಲ್ಲಾ ರಾಜ್ಯಗಳಲ್ಲಿ, ಎಲ್ಲಾ ಭಾಷೆಗಳಲ್ಲಿ ಕಾಣದ ಗರ್ಭ ಅಂತ ಇರುತ್ತದೆ. ಅಲ್ಲಿ ಏನೆಲ್ಲಾ ನಡೆಯುತ್ತದೆ.. ಬೆಂಗಳೂರಿನಲ್ಲೇ  ಗೊತ್ತಿರುವ ಸಂಗತಿಯಿಟ್ಟುಕೊಂಡು ಹತ್ತಾರು ವರ್ಷಗಳಿಂದ ಯೋಚನೆ ಮಾಡುತ್ತಿದೆ. ಸಿನಿಮಾ ಮಾಡಲು ಆಗಿರಲಿಲ್ಲ. ನಿರ್ಮಾಪಕ ದೇವೇಂದ್ರ  ಸಿನಿಮಾ ಮಾಡಲೇಬೇಕು ಎಂದಾಗ  ಈ ಚಿತ್ರದ ಕಥೆ ಹೇಳಿದೆ. ದೇಶದಲ್ಲಿ ಪ್ರತಿವರ್ಷ ಎರಡೂವರೆ ಸಾವಿರ ಮಹಿಳೆಯರು ಒಂದಲ್ಲಾ ಒಂದು ಕಾರಣದಿಂದ ಬಲಿಯಾಗುತ್ತಿದ್ದಾರೆ  ಅದಕ್ಕೆ ಕಾರಣ ಏನು ಎಂಬುದನ್ನು ತಿಳಿಸುವ ಕಥೆ ಕೂಡ  ಚಿತ್ರದಲ್ಲಿದೆ.

  ಸಂಯುಕ್ತ ಹೆಗಡೆ  ಚಿತ್ರಕ್ಕಾಗಿ ಬಹಳ ಶ್ರಮ ಪಟ್ಟಿದ್ದಾರೆ. ಈ ಚಿತ್ರದ ಮೂಲಕ ಅವರು  ಎತ್ತರಕ್ಕೆ ಹೋಗುತ್ತಾರೆ. ನಿರ್ದೇಶಕ ಅಭಿಷೇಕ್ ಬಸಂತ್ ನನ್ನ ತಮ್ಮನ ಮಗ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ನಿರ್ದೇಶಕ ಅಭಿಷೇಕ್ ಬಸಂತ್ ಮಾತನಾಡಿ, ಚಿತ್ರತಂಡದ ಸಹಕಾರದಿಂದ ಇಪ್ಪತ್ತೆಂಟು ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ.‌  ಸದ್ಯದಲ್ಲೇ  ಚಿತ್ರ ಬಿಡುಗಡೆಯಾಗಲಿದೆ ಎಂದರು.

ನಾಯಕಿ ಸಂಯುಕ್ತ ಹೆಗ್ಡೆ ಮಾತನಾಡಿ, ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಐದು ವರ್ಷಗಳ ನಂತರ  ನಟಿಸಿರುವ  ಸಿನಿಮಾ ಇದು.  ಆಕ್ಷನ್ ಕೂಡ ಮಾಡಿದ್ದೇನೆ. ಕಾಲು ಕೂಡ ಮುರಿದಿತ್ತು. ಒಟ್ಟಿನಲ್ಲಿ ಎಲ್ಲರ ಶ್ರಮದಿಂದ “ಕ್ರೀಂ” ಚಿತ್ರ ಚೆನ್ನಾಗಿ ಬಂದಿದೆ ಎಂದರು.

ನಿರ್ಮಾಪಕ ದೇವೇಂದ್ರ ಇಡೀ ತಂಡದ ಚಿತ್ರ ಚೆನ್ನಾಗಿ ಮೂಡಿಬರಲು ಪಟ್ಟಿರುವ ಶ್ರಮ ಅಷ್ಟಿಷ್ಟಲ್ಲ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರಲಾಗುವುದು ತಿಳಿಸಿದರು.

ಸಂಗೀತ ನಿರ್ದೇಶಕ ರೋಹಿತ್, ಕಲಾ ನಿರ್ದೇಶಕ ಶಿವಕುಮಾರ್ ಹಾಗೂ ಚಿತ್ರದಲ್ಲಿ ನಟಿಸಿರುವ ರೋಷನ್‌ ಅಗ್ನಿ ಶ್ರೀಧರ್ ಬಚ್ಚನ್, ಇಫ್ರಾನ್ ಮುಂತಾದವರು “ಕ್ರೀಂ” ಚಿತ್ರದ ಕುರಿತು ಮಾತನಾಡಿದರು.